ಡಾಕ್ಟರ್ ಬಿ ಆರ್ ಅಂಬೇಡ್ಕರ್ ಯುವಕ ಮಂಡಲ ರಿ. ಮತ್ತು ಮಹಿಳಾಮಂಡಳದ ಜಂಟಿ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶ್ರೀ ಶಂಕರ್ ದಾಸ್ ಧ್ವಜಾರೋಹಣ ಮಾಡಿದರು.
ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿರುವ ನಿವೃತ್ತ ಪ್ರಾಂಶುಪಾಲರಾದ ಶ್ರೀ ಗಣನಾಥ ಎಕ್ಕಾರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸ್ವಾತಂತ್ರ್ಯ ಹಾಗೂ ಸಂವಿಧಾನದ ಮಹತ್ವ ತಿಳಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುಂದರ ಮಾಸ್ಟರ್ ಪ್ರಸ್ತಾವಿಕ ಮಾತನಾಡಿದರು.
ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸ್ಥಳೀಯ ಶಾಲಾ ಮಕ್ಕಳಿಗೆ ನಡೆಸಿದ ದೇಶಭಕ್ತಿ ಗೀತೆ ಹಾಗೂ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು ಹಾಗೂ ಭಾಗವಹಿಸಿದ ಸುಮಾರು 45 ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಯಿತು.
ಕಾರ್ಯಕ್ರಮಕ್ಕೆ ಆಗಮಿಸಿರುವ ಮತ್ತೋರ್ವ ಅತಿಥಿಯಾಗಿರುವ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಯಾದ ಶ್ರೀ ರಾಜೀವ ಶೆಟ್ಟಿ ಬಸ್ರೂರು ಶುಭ ಕೋರಿದರು. ವೇದಿಕೆಯಲ್ಲಿ ಅಂಬೇಡ್ಕರ್ ಯುವಕ ಮಂಡಲದ ಅಧ್ಯಕ್ಷರಾದ ಸುರೇಶ್ ಕೋಟ್ಯಾನ್, ಮಹಿಳಾಮಂಡಲದ ಅಧ್ಯಕ್ಷರಾದ ಶ್ರೀಮತಿ ಜಾನಕಿ ಶಂಕರ್ ದಾಸ್, ದಸಂಸ ಗ್ರಾಮ ಶಾಖೆಯ ಸಂಚಾಲಕರಾದ ಶಿವಾನಂದ ಮೂಡುಬೆಟ್ಟು, ಸಹರ ಕ್ರಿಕೆಟರ್ಸ್ ನ ಅಧ್ಯಕ್ಷರಾದ ನಿಶಾನ್ ಉಪಸ್ಥಿತರಿದ್ದರು. ಸುರೇಂದ್ರ ಕೋಟ್ಯಾನ್ ಕಾರ್ಯಕ್ರಮದ ನಿರೂಪಣೆ ಮಾಡಿ, ಶಂಕರ್ ದಾಸ್ ವಂದನಾರ್ಪಣೆ ಗೈದರು. ಅಕ್ಕಣಿ ಟೀಚರ್, ಶ್ರೀಲತಾ ವಸುಧಾ ನಳೀನಿ, ಶಾಂತ ಪುಷ್ಪ ಮೋಹನ ಸತೀಶ ಜಗನ್ನಾಥ ಇನ್ನಿತರರು ಭಾಗವಹಿಸಿದ್ದರು.