Header Ads Widget

ಅರುಣ್ ಪುತ್ತಿಲ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿರ್ಬಂಧ


ಪುತ್ತೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಕೋರಿ ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಪುತ್ತಿಲ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿದೆ.

ಅವರ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಕಟಿಸುವುದಾಗಲೀ ಅಥವಾ ಬಿತ್ತರಿಸುವುದಾಗಲೀ ಮಾಡಬಾರದು’ ಎಂದು ಬೆಂಗಳೂರಿನ ಸಿಟಿ ಮತ್ತು ಸಿವಿಲ್ ಸೆಷನ್ಸ್ ನ್ಯಾಯಾಲಯ ತಾತ್ಕಾಲಿಕ ಆದೇಶ ನೀಡಿದೆ.

ಮಹಿಳೆಯೊಂದಿಗೆ ಮಾತನಾಡುತ್ತಿರುವ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾ‌ರ್ ಪುತ್ತಿಲ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.