Header Ads Widget

ರಾಜಭವನ ಒತ್ತಡದಲ್ಲಿ ಕೆಲಸ ಮಾಡುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ

 


:ಬೆಳಗಾವಿ: ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದು, ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಆರೋಪಿಸಿದರು. 


ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ಖಂಡಿತವಾಗಿಯೂ ನ್ಯಾಯಾಲಯದಲ್ಲಿ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿ ಧಾನದ ಮೇಲೆ ವಿಶ್ವಾಸವಿದೆ ಎಂದು ಹೇಳಿದರು. 


ಕಾಂಗ್ರೆಸ್‌ ಎಂದೆಂದಿಗೂ ಬಡವರ ಪರ, ಬಡವರಿ ಗಾಗಿಯೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೇಂದ್ರ ಸರ್ಕಾರವೇ ಶ್ರೀಮಂತರ 16 ಲಕ್ಷ ಕೋಟಿ ರೂಪಾಯಿಯನ್ನು ಮನ್ನಾ ಮಾಡಿದೆ ಎಂದು ಹೇಳಿದರು.