ಶ್ರೀಕೃಷ್ಣ ಮಾಸೋತ್ಸವ ಸಮಾರೋಪ ಸಮಾರಂಭ ಸಂಜೆ 5ರಿಂದ ರಾಜಾಂಗಣದಲ್ಲಿ ನಡೆಯಲಿದ್ದು, *ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್* ಅಭ್ಯಾಗತರಾಗಿ ಆಗಮಿಸುವರು.
ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಡಾ ಮಂಜುನಾಥ ಭಂಡಾರಿ ಮತ್ತು ಪ್ರತಾಪಸಿಂಹ ನಾಯಕ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಮತ್ತು ವಿನಯಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಅತಿಥಿಗಳಾಗಿ ಆಗಮಿಸುವರು.
ಪಡುಬಿದ್ರಿ ತರಂಗಿಣಿ ಮಿತ್ರ ಮಂಡಳಿಯ ಹರೀಶ್ ಭಟ್ ಮತ್ತು ಪ್ರಭಾಕರ ಅಡಿಗ ಮಂಗಳೂರು ಅವರಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗುವುದು