ಸೋಷಿಯಲ್ ಮೀಡಿಯಾದಲ್ಲಿ ಈಗ ರೀಲ್ಸ್ ಹವಾ ಜಾಸ್ತಿಯಾಗಿದೆ. ಯುವಕ-ಯುವತಿಯರಂತು ತಮ್ಮ ಫಾಲೋವರ್‌ಗಳನ್ನ ಹೆಚ್ಚಿಸಿಕೊಳ್ಳಲು, ಹೆಚ್ಚು ವೀವ್ಸ್ ಮತ್ತು ಲೈಕ್ಸ್ ಪಡೆಯಲು ಹಲವು ರೀತಿಯ ಸ್ಟಂಟ್‌ಗಳನ್ನ ಮಾಡ್ತಾರೆ. ಅದರಲ್ಲೂ ಕೆಲ ಯುವತಿಯರು ಮೈಬಿಸಿ ಏರಿಸುವಂತಹ ಬಟ್ಟೆ ತೊಟ್ಟು ಫೋಟೋ ಶೂಟ್ ಮಾಡಿಸುವುದನ್ನೇ ಟ್ರೆಂಡ್ ಆಗಿ ಮಾಡಿಕೊಂಡಿದ್ದಾರೆ. ಅದೇ ರೀತಿ ಉಡುಪಿ ಬೀಚ್‌ನಲ್ಲಿ ಬಿಕಿನಿ ತೊಟ್ಟು ಫೋಟೋಶೂಟ್ ಮಾಡಿಸುತ್ತಿದ್ದ ಯುವತಿಯೊಬ್ಬಳು ಅದನ್ನು ತಡೆಯಲು ಬಂದ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಹೌದು. ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಬಿಕಿನಿ ತೊಟ್ಟು ಫೋಟೋಶೂಟ್ ಮಾಡಿಸುತ್ತಿದ್ದ ವೇಳೆ ಮಲ್ಪೆ ಪೊಲೀಸರು ಯುವತಿಯನ್ನ ತಡೆಯಲು ಮುಂದಾಗಿದ್ದಾರೆ. ಇದರಿಂದ ಅಸಮಾಧಾನಗೊಂಡ ಯುವತಿ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಫೋಟೋ-ವೀಡಿಯೊವೊಂದನ್ನು ಅಪ್ಲೋಡ್ ಮಾಡಿ ತಮಗಾದ ಕಹಿ ಅನುಭವ ಹಂಚಿಕೊಂಡಿದ್ದಾರೆ.