Header Ads Widget

ರತ್ನಾಕರ್ ಇಂದ್ರಾಳಿಯವರಿಗೆ ಶ್ರೀ ಕೃಷ್ಣಗೀತಾನುಗ್ರಹ ಪ್ರಶಸ್ತಿ


ಕೈಮಗ್ಗದ ನೇಕಾರಿಕೆಯ ಅದ್ಭುತ ಕಲಾಕೌಶಲ್ಯವನ್ನು ಪೋಷಿಸಿ ಬೆಳೆಸಲು ನಿರಂತರವಾಗಿ ಶ್ರಮಿಸುತ್ತ, ಪುತ್ತಿಗೆ ಮಠದ ಪರ್ಯಾಯ ಮತ್ತು ಶ್ರೀ ಕೃಷ್ಣ ಮಾಸೋತ್ಸವದ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕೈಮಗ್ಗ ಸೀರೆಗಳ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಿ, ಕೈಮಗ್ಗದ ಉದ್ದಿಮೆಗೆ ಮತ್ತು ಶ್ರೀ ಕೃಷ್ಣ ಮಾಸೋತ್ಸವಕ್ಕೆ ವಿಶೇಷವಾದ ಮೆರುಗನ್ನು ನೀಡಿದ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷರಾದ ರತ್ನಾಕರ್ ಇಂದ್ರಾಳಿಯವರಿಗೆ ಪರ್ಯಾಯ ಪುತ್ತಿಗೆ ಶ್ರೀಗಳು ಶ್ರೀಕೃಷ್ಣ ಜಯಂತಿಯ ಅಂಗವಾಗಿ ಶ್ರೀ ಕೃಷ್ಣಗೀತಾನುಗ್ರಹ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.