ಕಾರ್ಕಳದಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಕಾಮಾಂಧರ
ಕಾರ್ಕಳದ ಕುಕ್ಕುಂದೂರಿನಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಬೀಬತ್ಸ್ಯ ಘಟನೆ ನಾಗರಿಕ ಸಮಾಜ ಬೆಚ್ಚಿ ಬೀಳುವಂತೆ ಮಾಡಿದೆ.
ಸಮಾಜ ವಿದ್ರೋಹಿ ಕಾಮಾಂಧರ ಅಟ್ಟಹಾಸ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಹಿನ್ನೆಲೆ ಹಾಗೂ ಅವರಿಗಿರುವ ಮಾದಕ ವಸ್ತು ಜಾಲದ ನಂಟಿನ ಬಗ್ಗೆಯೂ ಪೊಲೀಸ್ ಇಲಾಖೆ ಕೂಲಂಕುಷ ತನಿಖೆ ನಡೆಸ ಬೇಕಾಗಿದೆ.
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಹುಬ್ಬಳ್ಳಿಯ ನೇಹಾ ಹತ್ಯೆ, ಬೆಳಗಾವಿ ಪ್ರಕರಣ ಸಹಿತ ರಾಜ್ಯದೆಲ್ಲೆಡೆ ನಡೆಯು ತ್ತಿರುವ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯದಿಂದ ರಾಜ್ಯದಲ್ಲಿ ಮಹಿಳೆ ಯರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಮಹಿಳೆಯರಿಗೆ ಯಾವುದೇ ಸುರಕ್ಷತೆ ಇಲ್ಲದಂತಾಗಿದೆ.
ಸುಸಂಸ್ಕೃತರ ನಾಡು ಎನಿಸಿಕೊಂಡಿ ರುವ ಉಡುಪಿ ಜಿಲ್ಲಾ ಇಂತಹ ಹೇಯ ಕೃತ್ಯ ನಡೆದಿರುವುದು ಜಿಲ್ಲೆಗೆ ಕಳಂಕ ತಂದಿದೆ. ಆರೋಪಿಗಳು ಎಷ್ಟೇ ಪ್ರಭಾವಿ ಗಳಾಗಿದ್ದರೂ ಅವರ ಹೆಡೆಮುರಿ ಕಟ್ಟುವ ಜೊತೆಗೆ ಮಹಿಳೆಯರಿಗೆ ರಕ್ಷಣೆ ನೀಡುವ ಸತ್ಕಾರ್ಯ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಆಗಬೇಕಿದೆ.
ಪೋಲಿಸ್ ಇಲಾಖೆ ಮಾದಕ ವಸ್ತುಗಳ ನಿಗ್ರಹದ ಜೊತೆಗೆ ಸದ್ರಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಗಣನೆಗೆ ತೆಗೆದುಕೊಂಡು ಎಲ್ಲ ಆಯಾಮಗಳಲ್ಲಿ ತನಿಖೆಯನ್ನು ನಡೆಸಿ, ಅಪರಾಧಿಗಳಿಗೆ ಕಾನೂನು ರೀತ್ಯಾ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರೇಷ್ಮಾ ಉದಯ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.