ಉಡುಪಿ: ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಕಟಪಾಡಿ ಬೀಡು ವಿನಯ ಬಲ್ಲಾಳ್ (63) ಅವರು ಹೃದಯಾ ಘಾತದಿಂದ ಆ. 27ರಂದು ನಿಧನ ಹೊಂದಿ ದರು. ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರಾಗಿ, ಹಾಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕಟಪಾಡಿ ಗ್ರಾ.ಪಂ.ನಲ್ಲಿ ಅಧ್ಯಕ್ಷ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಕಟಪಾಡಿ ಬಂಟರ ಸಂಘದ ಮಾಜಿ ಅಧ್ಯಕ್ಷ ರಾಗಿರುವ ಅವರು ವಿವಿಧ ದೇವಸ್ಥಾನ, ದೈವಸ್ಥಾನಗಳಲ್ಲಿ ಜೀರ್ಣೋದ್ದಾರ ಸಮಿತಿ ಗಳಲ್ಲಿ ತೊಡಗಿಸಿಕೊಂಡಿದ್ದರು.
ಸಾಮಿಲ್ ಉದ್ಯಮಿಯಾಗಿದ್ದು, ಸಾಮಿಲ್ ಉಡುಪಿ ಜಿಲ್ಲಾ ಯೂನಿಯನ್ ಅಧ್ಯಕ್ಷ ರಾಗಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮೊದಲಾದವರು ಸಂತಾಪ ಸೂಚಿಸಿದ್ದಾರೆ