ಬಿಲ್ಲವ ಸೇವಾ ಸಂಘ(ರಿ.), ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಇದರ ವತಿಯಿಂದ 8ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಶ್ರೀ ದಯಾಕರ ಶಾಂತಿ ಬನ್ನಂಜೆ ಅವರ ಪೌರೋಹಿತ್ಯದಲ್ಲಿ ನಡೆಯಿತು.
ಮಹಾ ಪೂಜೆ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಿತು.
ಸುಮಾರು 350ಕ್ಕೂ ಮಿಕ್ಕಿ ಭಕ್ತಾಭಿಮಾನಿಗಳು ಶ್ರೀ ವರಮಹಾಲಕ್ಷ್ಮೀ ಪೂಜೆ ಸಲ್ಲಿಸಿದ್ದರು.