Header Ads Widget

ಬ್ರಹ್ಮಗಿರಿ : ಫ್ಲಾಟ್‌ ಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ; ಕಳ್ಳತನಕ್ಕೆ ವಿಫಲ ಯತ್ನ!

 


ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ಆಗಸ್ಟ್ 01ರ ಮುಂಜಾನೆ ನಡೆದಿದೆ.

ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದರಲ್ಲಿ ನಾಲ್ವರು ವ್ಯಕ್ತಿಗಳು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲಾಟ್‌ನ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್‌ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವುದು ಕಂಡುಬಂದಿದೆ.

ಮುಸುಕುಧಾರಿಗಳು ಒಳನುಗ್ಗಲು ಯತ್ನಿಸಿದ ಫ್ಲಾಟ್‌ನಲ್ಲಿ ವಯಸ್ಸಾದ ದಂಪತಿಗಳು ವಾಸಿಸುತ್ತಿದ್ದರು. ಈ ದಂಪತಿಗಳು ಒಂದು ವಾರದ ಹಿಂದಷ್ಟೇ ಮುಂಬೈಗೆ ಪ್ರಯಾಣ ಬೆಳೆಸಿದ್ದರು. ಇದೀಗ ಈ ದಂಪತಿಗಳ ಫ್ಲಾಟ್‌ಗೆ ಮುಸುಕುಧಾರಿಗಳು ನುಗ್ಗಲು ಪ್ರವೇಶಿಸುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ನಾಲ್ವರು ಶಸ್ತ್ರಸಜ್ಜಿತ ಮುಸುಕುಧಾರಿಗಳು ಹಲವಾರು ಖಾಲಿ ಅಪಾರ್ಟ್ ಮೆಂಟ್‌ಗಳಿಗೆ ನುಗ್ಗಿ ಬೆಲೆಬಾಳುವ ವಸ್ತುಗಳ ಹುಡುಕಾಡುವ ಜೊತೆಗೆ ಅಪಾರ ಹಾನಿಯನ್ನುಂಟು ಮಾಡಿರುತ್ತಾರೆ. ಇನ್ನು ಈ ನಾಲ್ವರು ಒಂದೇ ಬಡಾವಣೆಯ ಒಟ್ಟು ಮೂರು ಅಪಾರ್ಟ್ ಮೆಂಟ್‌ ಕಟ್ಟಡಗಳಲ್ಲಿ ದರೋಡೆಗೆ ಯತ್ನಿಸಿದ್ದರು ಎನ್ನಲಾಗಿದೆ.