ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 'ಹರ್ ಘರ್ ತಿರಂಗಾ' ಅಭಿಯಾನದಡಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಪತ್ರಿಕಾ ಸಂಸ್ಥೆಗಳ ಕಛೇರಿಗೆ ತೆರಳಿ ದೃಶ್ಯ ಮತ್ತು ಮುದ್ರಣ ಮಾಧ್ಯಮದ ಪ್ರತಿನಿಧಿಗಳಿಗೆ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ದೆ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ ಹಾಗೂ ಜಿಲ್ಲಾ ದೃಶ್ಯ ಮತ್ತು ಮುದ್ರಣ ಮಾಧ್ಯಮದ ಪ್ರತಿನಿಧಿಗಳು ಉಪಸ್ಥಿತರಿದ್ದರು.