ಕಾರ್ಕಳದ ಕುಕುಂದೂರು ಅಯ್ಯಪ್ಪ ನಗರ ಗರಡಿ ಬಳಿ ನಿವಾಸಿ ಭೋವಿ ಸಮುದಾಯದ ಬಡ ಯುವತಿಯೋರ್ವಳಿಗೆ ಕೆಲ ದುಷ್ಕರ್ಮಿಗಳು ಮತ್ತು ಭರಿಸುವಂತ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ಅತ್ಯಂತ ಖಂಡನೀಯ. ಈ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯಲ್ಲಿ ಶಾಮೀಲಾಗಿರುವ ಎಲ್ಲಾ ಆರೋಪಿಗಳನ್ನು ತಕ್ಷಣ ದಲಿತ, ದೌರ್ಜನ್ಯ ಪ್ರಕರಣದಡಿ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾ ರಮೇಶ್ ಅವರು ಆಗ್ರಹಿಸಿದ್ದಾರೆ.
ಪ್ರಸ್ತುತ ಘಟನೆಯ ಪರಿಣಾಮ ಸಮಾಜದಲ್ಲಿ ಮಹಿಳೆಯರಿಗೆ ಭಯದ ಹಾಗೂ ಉಸಿರು ಗಟ್ಟಿಸುವ ವಾತಾವರಣ ಉಂಟಾಗಿದ್ದು ಈ ಉಗ್ರ ಕೃತ್ಯವನ್ನು ಎಸಗಿದ ಜಿಹಾದಿಗಳು ಕ್ರಿಮಿನಲ್ ಹಿನ್ನೆಲೆಯವರಾಗಿರುವ ಸಂಶಯವಿದ್ದು ಇದೊಂದು ಪೂರ್ವಯೋಜಿತ ಕೃತ್ಯ ಎಂದು ಕಂಡುಬರುತ್ತದೆ.
ಈ ಅಮಾನವೀಯ ಕೃತ್ಯದ ಹಿಂದೊಂದು ಅಂತರಾಷ್ಟ್ರೀಯ ಡ್ರಗ್ಸ್ ಜಾಲವೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ, ಈ ಬಗ್ಗೆ ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳದಿಂದ ನಡೆಸಬೇಕೆಂದು ಒತ್ತಾಯಿಸುತ್ತೇವೆ.
ಈ ಮೂಲಕ ಪ್ರಕರಣ ಹಿಂದಿರುವ ಶಕ್ತಿಗಳನ್ನು ಪತ್ತೆ ಹಚ್ಚಿ ಬೇಧಿಸಬೇಕು, ಹಾಗೂ ಜಿಲ್ಲಾ ಉಸ್ತುವಾರಿ ಮತ್ತು ಮಹಿಳಾ ಹಾಗೂ ಮಕ್ಕಳ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಘಟನಾ ಸ್ಥಳಕ್ಕೆ ಬೇಟಿ ನೀಡುವಂತೆ ಆಗ್ರಹಿಸಿದ್ದಾರೆ.
ಜಿಲ್ಲಾದ್ಯಂತ ಕಾಲೇಜು ಕ್ಯಾಂಪಸ್ ಗಳ ವ್ಯಾಪ್ತಿಗಳಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿರುವ ಬಗ್ಗೆ ಈ ಮೊದಲು ಕೂಡ ಮಾಧ್ಯಮದಲ್ಲಿ ಬಂದಿರುತ್ತದೆ. ಆದರೂ ಕೂಡ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳದಿರುವುದು ಖೇದಕರ. ಈ ಬಗ್ಗೆ ಇಲಾಖೆ ಮೊದಲೇ ಎಚ್ಚೆತ್ತುಕೊಳ್ಳುತ್ತಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ.
ಆದುದರಿಂದ ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸಂತ್ರಸ್ತೆಗೆ ತ್ವರಿತ ನ್ಯಾಯ ಒದಗಿಸಬೇಕು ಹಾಗೂ ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಸಾಧ್ಯತೆಯಿದ್ದು, ಇಂತಹ ಹೇಯ ಕೃತ್ಯ ನಡೆಸಿರುವವರನ್ನು ತಕ್ಷಣವೇ ಬಂಧಿಸಬೇಕು. ಇಲ್ಲವಾದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾದ್ಯಂತ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸಂಧ್ಯಾ ರಮೇಶ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮನವಿ ಸಲ್ಲಿಸಲಾಯಿತು.
I ಸಂದರ್ಭದಲ್ಲಿ ನಳಿನಿ ಪ್ರದೀಪ್ ಜ್ಯೋತಿ, ಉದಯ್ ಪೂಜಾರಿ, ಪವಿತ್ರ ಶೆಟ್ಟಿ, ಸುಮಾ ಶೆಟ್ಟಿ, ಸುಜಲ ಸುವರ್ಣ, ನಿರ್ಮಲ ಶೆಟ್ಟಿ, ನಾಗವೇಣಿ, ನಗರ ಅಧ್ಯಕ್ಷೆ ನೀತಾ ಪ್ರಭು, ವೀಣಾ ಶೆಟ್ಟಿ, ಗೀತಾಂಜಿ ಸುವರ್ಣ, ಶ್ಯಾಮಲ ಕುಂದರ್ ಮೊದಲಾದವರಿದ್ದರು.