ತೆಲುಗು ಹಾಗೂ ತಮಿಳು ನಟಿ ಹಾಗೂ ರಾಜಕಾರಣಿ, ಈ ಬಾರಿಯ ಲೋಕಸಭೆ ಚುನಾವಣೆಯ ಹೈದರಾಬಾದ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಕುಟುಂಬ ಸಮೇತ ಶುಕ್ರವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣ ದರ್ಶನ ಪಡೆದರು
ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಶ್ರೀಪಾದರು ಸಾಗರದಾಚೆಗೂ ನಡೆಸುತ್ತಿರುವ ಕೃಷ್ಣ ತತ್ವ ಪ್ರಸಾರ ಹಾಗೂ ಗೀತಾ ಪ್ರಚಾರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಶ್ರೀಪಾದರಿಂದ ಗೀತಾ ಲೇಖನಯಜ್ಞ ದೀಕ್ಷೆ ಪಡೆದರು.
ಈ ಸಂದರ್ಭದಲ್ಲಿ ಶ್ರೀಮಠದ ಕಾರ್ಯದರ್ಶಿ ಪ್ರಸನ್ನಾಚಾರ್ಯ, ಬಿಜೆಪಿ ಮಹಿಳಾ ಮೋರ್ಚಾ ನಿಕಟಪೂರ್ವ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ನಗರ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪೂರ್ಣಮಾ ರತ್ನಾಕರ್ ಮೊದಲಾದವರಿದ್ದರು.