ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ವಿಸ್ತರಿತ ಹಾಗೂ ನವೀಕರಣಗೊಂಡ ಆಡಳಿತ ಕಚೇರಿಯ ಉದ್ಘಾಟನೆಯನ್ನು ಆಗಸ್ಟ್ 10 ರಂದು ಆಯೋಜಿಸಿರುವುದಾಗಿ ಮಹಾಲಕ್ಷ್ಮೀ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಆಗಸ್ಟ್ 10 ರಂದು ಬೆಳಿಗ್ಗೆ 10 ಗಂಟೆಗೆ ಅಜ್ಜರಕಾಡು ಕಲ್ಮಂಜೆ ಟವರ್ಸ್ ನಲ್ಲಿರುವ ಸ್ವಂತ ಕಟ್ಟಡದಲ್ಲಿ ಬ್ಯಾಂಕಿನ ವಿಸ್ತರಿತ ಹಾಗೂ ನವೀಕರಣಗೊಂಡ ಆಡಳಿತ ಕಚೇರಿಯ ಉದ್ಘಾಟನೆಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ನೆರವೇರಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ರಾಷ್ಟೀಯ ಸಹಕಾರಿ ನೀತಿ ಅಧ್ಯಕ್ಷರಾದ ಶ್ರೀ ಸುರೇಶ್ ಪಿ. ಪ್ರಭು, ಕಿದಿಯೂರು ಹೋಟೆಲ್ ಆಡಳಿತ ನಿರ್ದೇಶಕರಾದ ಶ್ರೀ ಭುವನೇಂದ್ರ ಕಿದಿಯೂರು, ಕಾರ್ತಿಕ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಶ್ರೀ ಹರಿಯಪ್ಪ ಕೋಟ್ಯಾನ್, ಚಾರ್ಟೆಡ್ ಅಕೌಂಟೆಂಟ್ ಗಳಾದ ಶ್ರೀ ಗುಜ್ಜಾಡಿ ಪ್ರಭಾಕರ ನಾಯಕ್, ಶ್ರೀ ಗಣೇಶ್ ಕಾಂಚನ್, ಮತ್ಸ್ಯೋದ್ಯಮಿ ಶ್ರೀ ಸಾಧು ಸಾಲ್ಯಾನ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಬಿ. ಎನ್. ಶಂಕರ ಪೂಜಾರಿ ಮೊದಲಾದ ಗಣ್ಯರು ಉಪಸ್ಥಿತರಿರಲಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ಗ್ರಾಹಕರಿಗೆ ಆಧುನಿಕ ಬ್ಯಾಂಕಿಂಗ್ ಸೇವಯನ್ನು ಮೂಲಕ ಕರಾವಳಿ ಕರ್ನಾಟಕದ ಪ್ರತಿಷ್ಟಿತ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಅದೇ ದಿನ ಮಧ್ಯಾಹ್ನ 3 ಗಂಟೆಗೆ ಯುಪಿಐ ಡಿಜಿಟಲ್ ಬ್ಯಾಂಕಿಂಗ್ ಸೇವೆ ಉದ್ಘಾಟನೆಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.