ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ 2023-24ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 8 ನೇ ಬಾರಿಗೆ ಲಭಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್‍ಪಾಲ್ ಎ. ಸುವರ್ಣ ಹಾಗೂ ಉಪಾಧ್ಯಕ್ಷರಾದ ಶ್ರೀವಾಸುದೇವ ಸಾಲ್ಯಾನ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಪ್ರಧಾನ ವ್ಯವಸ್ಥಾಪನಾ ನಿರ್ದೇಶಕರಾದ ಶ್ರೀ ಶರತ್ ಕುಮಾರ್ ಶೆಟ್ಟಿ ಎನ್. ಉಪಸ್ಥಿತರಿದ್ದರು.