Header Ads Widget

ಶ್ರೀಮತಿ ಉಷಾಗೆ ಪಿಹೆಚ್.ಡಿ. ಪದವಿ

 

ಉಡುಪಿ: ದಾವಣಗೆರೆ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಉಷಾ ಇವರಿಗೆ ವಾಣಿಜ್ಯಶಾಸ್ತ್ರ ವಿಷಯದಲ್ಲಿ ಮಂಡಿಸಿದ ಸಂಶೋಧನ ಪ್ರಬಂಧಕ್ಕೆ ಕನ್ನಡ ವಿಶ್ವವಿದ್ಯಾನಿಲಯ ಹಂಪಿ ಡಾಕ್ಟರೇಟ್ ಪದವಿ ಪ್ರಧಾನ ಮಾಡಿದೆ. ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್‌ಸ್ರ್ಟೀಟ್, ಮಂಗಳೂರು, ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ವಾಲ್ಟರ್ ಡಿಸೋಜ ಇವರ ಮಾರ್ಗದರ್ಶನದಲ್ಲಿ ಇಂಪ್ಯಾಕ್ಟ್ ಆಫ್ ಜಿಎಸ್‌ಟಿ(ಗೂಡ್ಸ್ ಆಂಡ್ ಸರ್ವೀಸಸ್ ಟ್ಯಾಕ್ಸ್) ಆನ್ ಎಂಎಸ್‌ಎಂಇ ಸೆಕ್ಟರ್ ಎಂಬ ವಿಷಯದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು. ಶ್ರೀಮತಿ ಉಷಾ ಇವರು ಶ್ರೀ ರಾಮಪೂಜಾರಿ, ಶ್ರೀಮತಿ ಸುಮತಿ ಇವರ ಪುತ್ರಿ ಹಾಗೂ ಶ್ರೀ ಮಹೇಶ್ ಸುವರ್ಣ ಪುತ್ತೂರು ಇವರ ಪತ್ನಿ.