ಸಂಜೀವ ಶೆಟ್ಟಿಗಾರ್(76 ವರ್ಷ ) ಅಧ್ಯಕ್ಷರು, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಸೋಮಪ್ಪ ಜತ್ತನ್ನ (89 ವರ್ಷ) ನಿರ್ದೇಶಕರು , ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ ಇವರು ತಮ್ಮ ಜೀವಮಾನದ ಸಾಧನೆಗಾಗಿ ಕದಿಕೆ ಟ್ರಸ್ಟ್ , ಕೈಮಗ್ಗ ನೇಕಾರರಿಗೆ ಕೊಡ ಮಾಡುವ, ಪ್ರತಿಷ್ಟಿತ "ನೇಕಾರ ರತ್ನ " ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.
ಇವರಿಬ್ಬರು ಅವಿಭಜಿತ ದ. ಕ. ಜಿಲ್ಲೆಯ ಅತ್ಯಂತ ಹಿರಿಯ ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆ ಆಗಿದೆ.
ಸೋಮಪ್ಪ ಜತ್ತನ್ನ ಅವರು ಕಳೆದ 66 ವರುಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.
ಅಳಿವಿನಂಚಿಗೆ ತಲುಪಿದ್ದ ಉಡುಪಿ ಸೀರೆ ನೇಕಾರಿಕೆ ಈಗ ಕದಿಕೆ ಟ್ರಸ್ಟ್ ನ ಪ್ರಯತ್ನದಿಂದ ಪುನಃಶ್ಚೇತನಗೊಂಡಿದೆ.