ಉಡುಪಿ: ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಉಡುಪಿಯ ಅಂಚೆ ವಿಭಾಗದ ಅಧೀಕ್ಷಕ ರಮೇಶ್ ಪ್ರಭು, ಸಹಾಯಕ ಅಂಚೆ ಅಧೀಕ್ಷಕರಾದ ಕೃಷ್ಣರಾಜ ವಿಠ್ಠಲ ಭಟ್, ವಸಂತ ಹಾಗೂ ಉಪ ಅಂಚೆ ಪಾಲಕಿ ಪೂರ್ಣಿಮಾ ಜನಾರ್ದನ್, ಅಂಚೆ ಸಿಬ್ಬಂದಿ ಪ್ರಜ್ವಲ್ ರವರು ಉಡುಪಿ ವಿಧಾನಸಭಾ ಶಾಸಕ ಯಶ್ ಪಾಲ್ ಸುವರ್ಣರನ್ನು ಭೇಟಿಯಾಗಿ ಮಾನ್ಯ ಮಂತ್ರಿಗಳು, ಸಂಸ್ಕ್ರತಿ ಮತ್ತು ಪ್ರವಾಸೋದ್ಯಮ ಇಲಾಖೆ, ಭಾರತ ಸರಕಾರ ಇವರ ಪತ್ರವನ್ನು ಭಾರತೀಯ ಅಂಚೆ ಇಲಾಖೆಯಲ್ಲಿ ಲಭ್ಯವಿರುವ ತಿರಂಗಾ ರಾಷ್ಟ್ರಧ್ವಜದೊಂದಿಗೆ ಹಸ್ತಾಂತರಿಸಿದರು.