Header Ads Widget

ಪ್ರೊ.ಮಹೇಶ್ ಚಂದ್ರಗುರು ನಿಧನ

 


ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು(67) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾಗಿದ್ದ ಅವರು ಸೇವೆಯಿಂದ ನಿವೃತ್ತರಾಗಿದ್ದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದ್ದರು.

ಸಾಮಾಜಿಕ ಹೋರಾಟಗಳಲ್ಲಿ ಅವರು ಮುಂಚೂಣಿಯಲ್ಲಿದ್ದರು.

ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಕೊನೆಯುಸಿರೆಳೆದಿದ್ದಾರೆ.

ಕೆಯುಡಬ್ಲ್ಯೂಜೆ ಸಂತಾಪ:

ಪ್ರೊ.ಮಹೇಶ್ ಚಂದ್ರಗುರು ಅವರ ನಿದನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ಸಂತಾಪ ವ್ಯಕ್ತಪಡಿಸಿದೆ.