Header Ads Widget

ಹರ್ ಘರ್ ತಿರಂಗಾ ಅಭಿಯಾನ 

 


ಡುಪಿ:  ಪ್ರಸಕ್ತ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಆಗಸ್ಟ್ 15 ರಂದು ಜಿಲ್ಲಾ ಮಟ್ಟದಲ್ಲಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, ಸೆಲ್ಫಿ ಪಾಯಿಂಟ್‌ಗಳನ್ನು ಗುರುತಿಸಲಾಗಿರುತ್ತದೆ ಹಾಗೂ ಆಯಾ ತಾಲೂಕು ಮಟ್ಟದಲ್ಲಿಯೂ ಈ ಅಭಿಯಾನ ಸಂಬ೦ಧ ಕಾರ್ಯಕ್ರಮಗಳು ನಡೆಯಲಿವೆ.

 ಮನೆಯಲ್ಲಿ ಧ್ವಜಾರೋಹಣ ನಡೆಸುವುದು, ತಿರಂಗ ಸೆಲ್ಫಿಗಳನ್ನು harghartiranga.com ನಲ್ಲಿ ಅಪ್‌ಲೋಡ್ ಮಾಡಬಹುದಾಗಿದೆ ಹಾಗೂ ಸದರಿ ಪ್ರಮಾಣ ಪತ್ರಗಳನ್ನು #HarGharTiranga and # HGT2024 ನೊಂದಿಗೆ ಟ್ಯಾಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬಹುದಾಗಿದೆ.
 
ಆದ್ದರಿಂದ ಹರ್ ಘರ್ ತಿರಂಗಾ ಅಭಿಯಾನ ನಿಮಿತ್ತ ಆಯೋಜಿಸಲಾಗಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಕಾರ್ಯಕ್ರಮ ವನ್ನು ಯಶಸ್ವಿಯಾಗಿ ನೆರವೇರಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿತ್ರ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಮನೆಯಲ್ಲಿ ಹರ್ ಘರ್ ತಿರಂಗಾ ಸಂಬ್ರಮ..