Header Ads Widget

ಉಡುಪಿ : ಶ್ರೀ ಕೃಷ್ಣ ಮಠದ ಗೀತಾಮಂದಿರದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಪನ್ನ


ಉಡುಪಿಯ ಶ್ರೀ ಕೃಷ್ಣ ಮಠದ ಗೀತಾಮಂದಿರದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಧ್ವಜಾರೋಹಣವನ್ನು ನೆರವೇರಿಸಿದರು. ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಸುಗುಣ ಶಾಲೆಯ ಮಕ್ಕಳಿಂದ ದೇಶಭಕ್ತಿ ಗಾಯನ ಕಾರ್ಯಕ್ರಮ ನಡೆಯಿತು. ಶ್ರೀ ಕೃಷ್ಣ ಮಠದ ಭಕ್ತರು, ಪುತ್ತಿಗೆ ಮಠದ ದಿವಾನರು, ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಪುತ್ತಿಗೆ ಹಿರಿಯ ಶ್ರೀಪಾದರು ಸ್ವಾಂತಂತ್ರ್ಯ ದಿನದ ಬಗ್ಗೆ ಶುಭಾಶೀರ್ವಾದ ನೀಡಿದರು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಂಘ ಸಂಸ್ಥೆಯ ಸುಮಾರು ಹನ್ನೆರಡು ಸಾವಿರ ಸಿಹಿ ವಿತರಿಸಲಾಯಿತು.