ಕುಂದಾಪುರ ಕನ್ನಡ ಬದುಕಿನೊಂದಿಗೆ ಬೆಸೆದ ಭಾಷೆಯಾಗಿದೆ. ಕುಂದಾಪುರದವರು ತಮ್ಮ ತಾಯಿಗೆ ನೀಡುವಷ್ಟೇ ಗೌರವವನ್ನು ತಮ್ಮ ಭಾಷೆಗೆ ನೀಡುತ್ತಾಾರೆ ಎಂದು ಚಿತ್ರನಟ ರಮೇಶ್ ಭಟ್ ತಿಳಿಸಿದರು.
ಟೀಂ ಕುಂದಾಪುರಿಯನ್‌ಸ್ ಭಾನುವಾರ ಬಸವೇಶ್ವರ ನಗರದ ನೇತಾಜಿ ಮೈದಾನದಲ್ಲಿ ಹಮ್ಮಿಿಕೊಂಡ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಾಟಿಸಿ ಮಾತನಾಡಿದರು. ಕುಂದಾಪುರ ಇದು ಬದುಕಿನ ಭಾಷೆಯೇ ಹೊರತು ಉದ್ಯಮದ ಭಾಷೆಯಲ್ಲ. ಹಾಗಾಗಿ ಇಂದಿಗೂ ಕುಂದಾಪುರ ಭಾಷೆ ಜೀವಂತವಾಗಿದೆ. ನಾವು ಎಷ್ಟೇ ದೊಡ್ಡ ವ್ಯಕ್ತಿಿಗಳಾದರೂ ಮಾತೃ ಭಾಷೆ ಹಾಗೂ ಮನೆಯ ಮೂಲ ಭಾಷೆ ಮರೆಯಬಾರದು. ನಮ್ಮ ಭಾಷೆಯ ಮಹತ್ವ ತಿಳಿದುಕೊಂಡು ಪ್ರತಿಯೊಬ್ಬರೂ ವ್ಯವಹರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕುಂದಾಪುರ ರತ್ನ ಪ್ರಶಸ್ತಿಿ ಕಲೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ಸಾಧನೆ ಮಾಡಿದ ಅರೆಹೊಳೆ ಸದಾಶಿವ ರಾವ್, ಚಿತ್ರ ನಿರ್ದೇಶಕ ಯಾಕುಬ್ ಖಾದರ್ ಅವರಿಗೆ ನೀಡಿ ಗೌರವಿಸಲಾಯಿತು. ‘ಕುಂದಾಪುರ ಸಮ್ಮಾಾನ’ ಗೌರವವನ್ನು ಯಕ್ಷಗಾನ ಕಲಾವಿದ ಶ್ರೀನಿವಾಸ ಸಾಸ್ತಾಾನ, ಗೌರಿ ಕೆ., ಮುಳುಗುತಜ್ಞ ಮಂಜುನಾಥ ಕೊಡ್ಲಾಾಡಿ, ಅಂತಾರಾಷ್ಟ್ರೀಯ ಕ್ರೀಡಾಪಟು ವಿಠ್ಠಲ್, ಸಮಾಜ ಸೇವೆ ದಿನೇಶ್ ಬಾಂದವ್ಯ, ಶಿಕ್ಷಣ ಸುಜಾತ, ಪ್ರಗತಿ ಪರ ಕೃಷಿಕ ಕೃಷ್ಣ ಕುಲಾಲ್ ಆವರ್ಸೆ ಅವರಿಗೆ ನೀಡಿ ಸಮ್ಮಾಾನಿಸಲಾಯಿತು.
ಶಾಸಕ ಗುರುರಾಜ್ ಗಂಟಿಹೊಳೆ, ಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್‌ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ನಟಿ ಅಮೃತಾ ರಾಮಮೂರ್ತಿ, ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದರು.