ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಈ ಶೈಕ್ಷಣಿಕ ವರ್ಷದಿಂದ ಅಬಾಕಸ್ ತರಗತಿಗಳನ್ನು ಪ್ರಾರಂಭಿಸಲಾಗಿದ್ದು ಇದರ ಉದ್ಘಾಟನೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಶಂಕರ ದೇವಾಡಿಗ ಇವರು ನೆರವೇರಿಸಿದರು, ರಾಪಿಡ್ ಇನ್ಸ್ಟಿಟ್ಯೂಟ್ ಆಫ್ ಅಬಾಕಸ್ ಈ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಸುನಿತಾ ಹೆಬ್ಬಾರ್ ಇವರು ಪ್ರಾಸ್ತವಿಕ ಮಾತುಗಳೊಂದಿಗೆ ಅಬಾಕಸ ನ ತರಬೇತಿಯಿಂದ ವಿದ್ಯಾರ್ಥಿಗಳಿಗಾಗುವ ಪ್ರಯೋಜನ ಮತ್ತು ತರಗತಿಗಳು ನಡೆಯುವ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಅಕ್ಷರ ರಥ ಸಮಿತಿಯ ಅಧ್ಯಕ್ಷರಾದ ಶ್ರೀ ನಾಗರಾಜ ಗಾಣಿಗ ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಸುಮತಿ ಪಾಲ್ಗೊಂಡಿದ್ದರು .ವಿದ್ಯಾ ಸಂಸ್ಥೆಯ ಶಿಕ್ಷಕ ಬಂಧುಗಳು ಸಂಪೂರ್ಣವಾಗಿ ಸಹಕರಿಸಿದರು.