Header Ads Widget

ಬಂಟ್ವಾಳದಲ್ಲಿ ಭೀಕರ ಅಪಘಾತ; ನವವಧು ಸ್ಥಳದಲ್ಲೇ ಸಾವು, ವರ ಚಿಂತಾಜನಕ!

 

ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದ ಅಪಘಾತದಲ್ಲಿ ಎರಡು ದಿನ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಪತಿ ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ದಾಖಲಾಗಿದೆ.

ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಮೃತರು. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರಿಗೆ ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಇದೇ ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಇವರಿಬ್ಬರ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ಬಳಿಕ ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ನವದಂಪತಿ ವಾಪಾಸ್ ಮನೆಗೆ ಪ್ರಯಾಣಿಸುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಗುದ್ದಿ ಮುಂದುಗಡೆ ಹಾರಿ ಕೆಎಸ್ಆರ್‌ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ.ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.