ಕುಕ್ಕುಜೆ - ದೊಂಡೇರಂಗಡಿ ನಿವಾಸಿ, ಕಡ್ತಲ ಗ್ರಾಮ ಪಂಚಾಯತ್ ಸದಸ್ಯರಾದ ಅರವಿಂದ ಹೆಗ್ಡೆ ( 58 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನರಾದರು. ಮೃತರು ಪತ್ನಿ, ತಾಯಿ, ಇಬ್ಬರು ಸಹೋದರರು, ಒಬ್ಬರು ಸಹೋದರಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಇವರು ಪ್ರಸ್ತುತ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು, ಶಾಲಾ ಅಭಿವೃದ್ಧಿ ಸಮಿತಿ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಯಶಸ್ವಿ ಗೆಳೆಯರ ಬಳಗದ ಕಾರ್ಯದರ್ಶಿಯಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದರು.