Header Ads Widget

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಹಿನ್ನಡೆ *****


ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದೆ.

ಹೈಕೋರ್ಟ್ ಹೇಳಿದ್ದೇನು?

ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನು ಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿ ಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ.

 ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾ ಗೊಳಿಸಿದ ಹೈಕೋರ್ಟ್​​, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯ ಪಾಲರ ಕ್ರಮ ಸೂಕ್ತವಾಗಿದೆ. 

ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದಿದೆ.