Header Ads Widget

ಮೊಹಮ್ಮದ್ ಫಾರೂಕ್ ಚಂದ್ರನಗರಗೆ ಗೌರವ ಡಾಕ್ಟರೇಟ್ ಪದವಿ


ಕಾಪು : ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿರುವ ಉಡುಪಿ ಜಿಲ್ಲೆ ಕಾಪು ತಾಲೂಕಿನ ಕಳತ್ತೂರು ಗ್ರಾಮದ ಸಮಾಜ ಸೇವಕ ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಇದರ ಆಡಳಿತ ನಿರ್ದೇಶಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆ ಪರಿಗಣಿಸಿ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಯು.ಎಸ್.ಎ ಚೆನ್ನೈ(ತಮಿಳುನಾಡು) ಘಟಕದಿಂದ ಗೌರವ ಡಾಕ್ಟರೇಟ್ ಪದವಿಗೆ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಚೆನ್ನೈ ಇದರ ಸ್ಥಾಪಕ ಅಧ್ಯಕ್ಷರಾದ ಡಾ.ಪಿ.ಎಂ ಮನವಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊಹಮ್ಮದ್ ಫಾರೂಕ್ ಚಂದ್ರನಗರ ಅವರ ಸಮಾಜ ಸೇವೆಗಾಗಿ ಉಡುಪಿ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ,ಸೇರಿದಂತೆ ಯು.ಎ.ಇ ದುಬೈ ಯೂತ್ ಐಕಾನ್ ಅಂತರಾಷ್ಟ್ರೀಯ ಪ್ರಶಸ್ತಿ ,ಗೋವಾದ ಜನಸೇವಾ ಸದ್ಭಾವನ್ ಪುರಸ್ಕಾರ್ ಪ್ರಶಸ್ತಿ ,ದೆಹಲಿಯ ಏಷ್ಯಾ ಫೆಸಿಫಿಕ್ ಗೋಲ್ಡ್ ಸ್ಟಾರ್ ಪ್ರಶಸ್ತಿ, ಕೇರಳದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ವತಿಯಿಂದ ಸಾಧಕ ರತ್ನ ಪ್ರಶಸ್ತಿ, ಕೈರಳಿ ಪ್ರಕಾಶನ ಕಾಸರಗೋಡು ಸಮಾಜ ರತ್ನ ಪ್ರಶಸ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಾಧಕ ರತ್ನ ಪ್ರಶಸ್ತಿ,ಸೇರಿದಂತೆ ಸಾಮಾಜಿಕ ರಾಜಕೀಯ ಧಾರ್ಮಿಕ ಕ್ಷೇತ್ರದಲ್ಲಿ ನೂರಾರು ಸಂಘ ಸಂಸ್ಥೆಗಳು ಗೌರವಿಸಿ ಜಿಲ್ಲಾ ರಾಜ್ಯ ರಾಷ್ಟೀಯ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.