ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತ ಸಂಭವಿಸಿ ಯುವತಿಯೋರ್ವಳು ಮೃತಪಟ್ಟ ಘಟನೆ ಸೆ.18 ಬುಧವಾರ ಸಂಜೆ ನಡೆದಿದೆ.
ಮೃತ ಯುವತಿ ಸಸಿಹಿತ್ತು ಅಗ್ಗಿದ ಕಳಿಯ ನಿವಾಸಿ ದಿ.ರಾಜೇಶ್ ಎಂಬವರ ಪುತ್ರಿ ರೋಶನಿ (23) ಎಂದು ತಿಳಿದು ಬಂದಿದೆ.
ಯುವತಿ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು, ಇತ್ತೀಚೆಗೆ ಮನೆಗೆ ಬಂದಿದ್ದಳು ಎಂದು ಹೇಳಲಾಗಿದೆ. ಜ್ವರ ಉಲ್ಬಣಗೊಂಡಿದ್ದರಿಂದ ಮನೆಯವರು ಆಕೆಯನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು ಎಂದು ತಿಳಿದು ಬಂದಿದೆ. ಬುಧವಾರ ಸಂಜೆಯ ವೇಳೆ ಯುವತಿಗೆ ಹೃದಯಾಘಾತ ಸಂಭವಿಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.