ಉಡುಪಿಯ ಹಿಂದಿ ಪ್ರಚಾರ ಸಮಿತಿಯ ಆಶ್ರಯದಲ್ಲಿ ಸೆಪ್ಟೆಂಬರ್ 14 ರಂದು ಹಿಂದಿ ದಿವಸವನ್ನು ವಿಶೇಷವಾಗಿ ಆಚರಿಸಲಾಯಿತು. ಅದರ ಅಂಗವಾಗಿ ನಡೆದ ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾದ ಶ್ರೀ ರಾಜಗೋಪಾಲ ಆಚಾರ್ಯರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಡುಪಿ ನಗರಸಭೆಯ ಉಪಾಧ್ಯಕ್ಷೆ ಶ್ರೀಮತಿ ರಜನಿ ಹೆಬ್ಬಾರ್ ಅವರು ಭಾಗವಹಿಸಿ ರಾಜಭಾಷೆ ಹಿಂದಿಯ ಅಗತ್ಯತೆ ಮತ್ತು ಅದನ್ನು ಕಲಿಯುವುದರಿಂದ ಆಗುವ ಅನುಕೂಲಗಳ ಬಗ್ಗೆ ತಿಳಿಸಿ ಅದಕ್ಕೆ ತಮ್ಮ ಸಹಕಾರದ ಆಶ್ವಾಸನೆ ನೀಡಿದರು.
ಈ ಸಭೆಯಲ್ಲಿ ಹಿಂದಿ ಪರೀಕ್ಷಾರ್ಥಿಗಳ ಹೆತ್ತವರು ಕೂಡ ಭಾಗವಹಿಸಿದ್ದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಸ್ವಾಗತ ಕೋರಿ ಪ್ರಾಸ್ತಾವಿಕ ಭಾಷಣವನ್ನು ಮಾಡಿದರು. ಉಪಾಧ್ಯಕ್ಷೆ ಶ್ರೀಮತಿ ಮುಕ್ತಾ ಶೆಣಯಿ ಅವರು ಮುಖ್ಯ ಅತಿಥಿ ಶ್ರೀಮತಿ ರಜನಿ ಹೆಬ್ಬಾರ ಅವರನ್ನು ಫಲ, ಪುಷ್ಪಗಳನ್ನು ಕೊಟ್ಟು ಸನ್ಮಾನಿಸಿದರು.
ದಕ್ಷಿಣ ಭಾರತ ಹಿಂದಿ ಪ್ರಸಾರ ಸಮಿತಿಯು ನಡೆಸುತ್ತಿರುವ ಪ್ರಥಮದಿಂದ ಪ್ರವೀಣದವರೆಗಿನ ಬೇರೆ ಬೇರೆ ಪರೀಕ್ಷೆಗಳಲ್ಲಿ ಉಡುಪಿ ಕೇಂದ್ರದಲ್ಲಿ ಗಣನೀಯ ಸಂಖ್ಯೆಯಲ್ಲಿ ಪರೀಕ್ಷಾರ್ಥಿಗಳು ಹಾಜರಾಗಿದ್ದುದು ಈ ಸಂದರ್ಭದಲ್ಲಿ ಒಂದು ವಿಶೇಷವಾಗಿತ್ತು.