Header Ads Widget

ಕಾರ್ಕಳ: ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾದ ಶಿಕ್ಷಕರ ದಿನಾಚರಣೆ


ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ, ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ. ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆದ *ಶ್ರೀ ಗುರುಭ್ಯೋ ನಮಃ* ಕಾರ್ಯಕ್ರಮವು ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಯಿತು.ಇಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿ ಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಹಾಗೂ ಜೈನ ಧರ್ಮಕ್ಕೆ ಸೇರಿರುವ ಶಿಕ್ಷಕಿಯರನ್ನು ಗೌರವಿಸಲಾಯಿತು.

ಈ ಸಮಾರಂಭದ ಸಭೆಯ ಅಧ್ಯಕ್ಷ ಸ್ಥಾನವನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಲೆ ಅವರು ವಹಿಸಿದ್ದರು .

ಈ ಸಭೆಯಲ್ಲಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಲಕ್ಷ್ಮೀ ಜೋಗಿ,ಶ್ರೀಮತಿ ರೆಹನಾ ಬೇಗಂ,ಶ್ರೀಮತಿ ಕ್ಯಾಥರೀನ್ ರೀನಾ ಕ್ಯಾಸ್ತಲಿನೋ ಹಾಗೂ ಶ್ರೀಮತಿ ವಸಂತಿಯವರನ್ನು ಗೌರವಿಸಲಾಯಿತು .ಬಿಪಿನ್ ಚಂದ್ರಪಾಲ್ ನಕ್ರೆ ಅವರು ಜ್ಯೋತಿ ಬೆಳಗಿಸಿ,ಡಾ . ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮಾಜಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ನಳಿನಿ ಆಚಾರ್ಯ ಅವರು ಕಾರ್ಯಕ್ರಮ ನಿರ್ವಹಿಸಿದರು.ಶ್ರೀಮತಿ ಕಾಂತಿ ಶೆಟ್ಟಿ, ಶ್ರೀಮತಿ ಭಾನು ಭಾಸ್ಕರ್,ಶ್ರೀಮತಿ ಶೋಭಾ ಮತ್ತು ಶ್ರೀಮತಿ ರೆಹಮತ್ ಅವರು ಸನ್ಮಾನಿತರನ್ನು ಪರಿಚಯಿಸಿದರು.ಶ್ರೀಮತಿ ಉಷಾ ಹಾಗೂ ಶಶಿ ಅವರು ಪ್ರಾರ್ಥನೆಗೈದರು.ದರು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಅನಿತಾ ಡಿ'ಸೋಜಾ ಬೆಳ್ಮಣ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನೂ ಸ್ವಾಗತಿಸಿದರು.ನಗರಾಧ್ಯಕ್ಷೆ ಶ್ರೀಮತಿ ರೀನಾ ಡಿ'ಸೋಜಾ ಅವರು ಧನ್ಯವಾದವಿತ್ತರು.ಇದೇ ಸಂದರ್ಭದಲ್ಲಿ ಸಭೆಯಲ್ಲಿ ಉಪಸ್ಥಿತರಿದ್ದ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಹಾಗೂ ಸೇವೆ ಸಲ್ಲಿಸುತ್ತಿರುವ ಶಿಕ್ಷಕರೆಲ್ಲರನ್ನೂ ಶಾಲು ಹೊದಿಸಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಸದಾಶಿವ ದೇವಾಡಿಗ,ಮಾಜಿ ನಗರಾಧ್ಯಕ್ಷ ಶ್ರೀ ಸುಭೀತ್, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಸುನೀತಾ ಶೆಟ್ಟಿ ಅಜೆಕಾರು,ಮಾಜಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಮಾಲಿನಿ ರೈ,ಪುರಸಭಾ ಸದಸ್ಯೆ ಶ್ರೀಮತಿ ಪ್ರತಿಭಾ ಮೋಹನ್,ಕರ್ನಾಟಕ ಕೊಂಕಣಿ ಅಕಾಡೆಮಿ ಸದಸ್ಯ ಶ್ರೀ ದಯಾನಂದ ಮಡ್ಕೇಕಾರ್,ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಸುಧಾಕರ ಕೋಟ್ಯಾನ್,ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಶ್ರೀಮತಿ ಚಂದ್ರಿಕಾ ಶೆಟ್ಟಿ, ಶ್ರೀಮತಿ ಜ್ಯೋತಿ ಹೆಬ್ಬಾರ್, ಶ್ರೀಮತಿ ಮೀನಾಕ್ಷಿ ಮಾಧವ ಬನ್ನಂಜೆ, ಜಯಶ್ರೀ ಶೇಟ್ ,ಕಾರ್ಕಳ ಬ್ಲಾಕ್ ನ ವಿವಿಧ ಘಟಕಗಳ ಅಧ್ಯಕ್ಷರು, ಹಾಗೂ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.