ಮಾನವ ಬಯಸಿದ್ದೆಲ್ಲ ನಿರಾಯಾಸವಾಗಿ ಪ್ರಾಪ್ತಿಯಾಗಬೇಕು ,ಜೀವನ ಸುಂದರ ಹಾಗೂ ನಿರಾಳವಾಗಬೇಕು, ಬದುಕಿನ ನಿರಂತರತೆಗೆ ಭಂಗ ಬರಬಾರದು, ನಿರ್ವಿಘ್ನವಾಗಿ ಬಾಳ ಬೇಕು ಎಂದು ಬಯಸಿದಾಗ ಸಹಜವಾಗಿ ವಿಘ್ನ ಗಳು ಬರುತ್ತವೆ, ಆಗ ಆತಂಕಕ್ಕೊಳಗಾಗು ತ್ತೇವೆ.
ಕಾರ್ಯಾರಂಭಗಳಿಗೆ ವಿಘ್ನ - ವಿಡ್ಡೂರಗಳು ಬಂದಾಗ ವಿಘ್ನದ ಕುರಿತು ಗಮನಹರಿದಿರ ಬೇಕು ನಮ್ಮ ಪೂರ್ವಜರಿಗೆ. ಒಂದೆಡೆ ನೆಲೆಯಾಗಿ ಕೃಷಿಯನ್ನು ಅವಲಂಬಿಸಿದಾಗ ಸ್ಥಿರ ವಾಸ್ತವ್ಯ ಅನಿವಾರ್ಯವಾಯಿತು .ಮನು ಕುಲದ ಬದುಕಿನ ಕ್ರಮ ನೇರ್ಪುಗೊಳ್ಳುತ್ತಿರು ವಂತೆ ವಿಘ್ನದ ಕುರಿತಾದ ಚಿಂತನೆ ಬಂದಿರ ಬಹುದು.ಆಗ ವಿಘ್ನನಿವಾರಕ ದೇವರೊಬ್ಬ ಸಾಕಾರಗೊಂಡಿತು ಎನ್ನಲಡ್ಡಿಯಿಲ್ಲ .
ವಿಘ್ನ - ತೊಂದರೆ - ತಡೆಗಳು ಎದುರಾದಾಗ ಈ ತಲ್ಲಣ, ಗೊಂದಲಗಳ ನಿವೃತ್ತಿಗಾಗಿ ವಿಘ್ನನಿವಾರಕ ದೇವರು ಎಂಬುದು ಅನು ಸಂಧಾನವಾಯಿತು. ನಮ್ಮ ವಿಶಾಲ ಮನೋ ಭಾವದ ಆಧ್ಯಾತ್ಮಿಕ ಬದುಕು , ಸಾಂಸ್ಕೃತಿಕ ವೈಚಾರಿಕ ವೈಶಾಲ್ಯತೆಯಲ್ಲಿ ಗಜಮುಖ ನಾದರೂ ಸುಮುಖನಾಗಿ ಆದಿಪೂಜಿತನು ಪ್ರಥಮ ಪೂಜೆಗೊಳ್ಳುತ್ತಾನೆ.
ಅಮೂರ್ತವಾದರೂ ಮೂರ್ತ ಚಿಂತನೆ ,ಅಲೌಕಿಕದ ಲೌಕಿಕ ದರ್ಶನ , ಪ್ರತಿಕೃತಿ ಆರಾಧನೆಗಳೆಲ್ಲ ವಿವಿಧ ಹಂತದಲ್ಲಿ ಅಭಿವೃದ್ಧಿ ಹೊಂದಿದಾಗಲೂ ನಮ್ಮ ಗಣಪ ಹಲವು ಸ್ಥಿತ್ಯಂತರ - ರೂಪಾಂತರಗಳಿಗೆ ಒಳಗಾದರೂ ಬೆಳೆದದ್ದು ಭವ್ಯವಾಗಿ .
ಸಂಸ್ಕೃತಿಯ ಮೂಲದಲ್ಲೆ ಇದ್ದ ಅಥವಾ ಆವಿರ್ಭವಿಸಿದ ಒಂದು ಚಿಂತನೆ ಇದಾದುರಿಂದ ಇದರ ಪರಿಣಾಮ ಇಷ್ಟು ತೀವ್ರವಾಗಿದೆ .ಗಾಢವಾಗಿ ಬೇರೂರಿದೆ .
ಅಸಂಗತ ,ಅಸಂಬದ್ದ ಪ್ರತಿಮಾಲಕ್ಷಣ , ಧಾರಣೆ - ವಾಹನಗಳಲ್ಲೂ ವೈರುಧ್ಯ , ಆಯುಧಗಳಲ್ಲೂ ಏನೋ ಒಂದು ಮೂಲದ ನೆನಪು, ಪ್ರತ್ಯಕ್ಷ ವಿರೋಧ - ಪರಸ್ಪರ ವಿರೋಧ ದ ಗಣಪನ ಭವ್ಯ ಬಿಂಬದಲ್ಲಿ ಪರಿಪೂರ್ಣತೆ ಯನ್ನು ,ಸುಮುಖತೆಯನ್ನು ,ಪ್ರಕೃತಿ - ವಿಕೃತಿಗಳನ್ನು ದಿವ್ಯಸಾನ್ನಿಧ್ಯವನ್ನು ಗುರುತಿಸಿ ರುವುದು ಅಚ್ಚರಿಯ ಸಂಗತಿ .
ಟ್ಟೆಗೆ ಬಿಗಿದುಕೊಂಡದ್ದು ಸರ್ಪ . ವಾಹನವಾಗಿ ಇಲಿ . ಇಲಿಯನ್ನು ಕಂಡ ಸರ್ಪ ಬೆನ್ನಟ್ಟಿ ಬೇಟೆಯಾಡುವುದು ಲೋಕರೂಢಿ. ಆದರೆ ಅಸಂಬದ್ಧ ಎನಿಸಿದರೂ ಈ ವಿನಾಯಕನ ಪ್ರತಿಮೆಯಲ್ಲಿ ಜಾತಿವೈರಗಳೇ ಇಲ್ಲ .ಅಸಂಗತಗಳೇ ಸುಸಂಗತಗಳಾಗುವ ಪರಿಷ್ಕಾರ ಗಣಪತಿಯ ಬಿಂಬದಲ್ಲಿ ಸ್ಪಷ್ಟ.
ಮಾನವ ದೇಹ ,ಆನೆಯ ತಲೆ ಇದು ಒಂದು ರೀತಿಯ ಅಸಂಭವ . ಇಂತಹ ಬೇರೆ ದೇವರು ಗಳೂ ನಮ್ಮಲ್ಲಿದ್ದಾರೆ . ಬೇಟೆ ಸಂಸ್ಕೃತಿಯ ಪ್ರತೀಕವಾಗಿ ಆನೆ ಎನ್ನುತ್ತಾ ಆದಿಮದ ಕಲ್ಪನೆಯಿಂದ ಗಜಾನನ ರೂಪವನ್ನು ಸಮರ್ಥಿಸಿದರೆ ಆತ ಬೇಟೆಯಿಂದ ಕೃಷಿ ಸಂಸ್ಕೃತಿಯವರೆಗೂ ತನ್ನ ಹರವನ್ನು ವಿಸ್ತರಿಸಿಕೊಳ್ಳುತ್ತಾನೆ . ಜನಪದರೊಂದಿಗೆಸ್ಥನ ಪಡೆಯುತ್ತಾನೆ .
ಮಕ್ಕಳಿಂದ ವೃದ್ಧರವರೆಗೆ ಹೇಗೆ ತನ್ನ ಛಾಪನ್ನು ಒತ್ತಿ ಪ್ರಿಯನಾಗುತ್ತಾನೆಯೋ ಅಂತೆಯೇ ಸಮಷ್ಟಿಯಲ್ಲಿ ಅದ್ಭುತ ಜನಪ್ರಿಯತೆವುಳ್ಳ ದೇವರಾಗುತ್ತಾನೆ . ಈ ಮಂಗಳಮೂರ್ತಿಯ ಪೂಜೆಯ ಅಥವಾ ಉಪಾಸನಾ ಅವಧಿಯಲ್ಲಿ ಆತ್ಮೀಯನಾಗುತ್ತಾ ಗಾಢವಾಗಿ ನಮ್ಮನ್ನು ಅಂದರೆ ಆರಾಧಕರನ್ನು ಆವರಿಸುತ್ತಾನೆ .ಈಗ ಹೇಳಿ ,ಈ ಮೂರ್ತಿ ನಿರ್ಣಯದಲ್ಲಿ ಅಸಂಗತ ವಿದೆಯೇ ?ಎಂ
ತಹ ದುಷ್ಟ ಮರ್ದನದಲ್ಲೂ ಬಳಸಬಹುದಾದ ಪ್ರಖರವಾದ ಆಯುಧ ಧರಿಸಿದ್ದರೂ ಗಣಪತಿ ಮೂರ್ತಿ ಪರಿಪೂರ್ಣವಾಗಬೇಕಿದ್ದರೆ ಒಂದು ಕೈಯಲ್ಲಿ ಮೋದಕ ಇರಲೇ ಬೇಕು .ಇಲ್ಲಿಯೂ ಆಯುಧ - ಆಹಾರದ ಸಾಂಗತ್ಯ ಅಚ್ಚರಿ ಮೂಡಿಸುವಂತಹದ್ದೆ .
ಗಾಣಪತೇಯರು ,ಆಧ್ಯಾತ್ಮಿಕ ಚಿಂತಕರು ,ವೈದಿಕ ವಿದ್ವಾಂಸರು ಗಣಪನನ್ನು ಪ್ರಣವ ಸ್ವರೂಪನೆಂದೇ ಕೊಂಡಾಡಿದರು. ಮಣ್ಣಿನಿಂದ ತೊಡಗಿ ಬಾನೆತ್ತರಕ್ಕೆ ಹರಡಿಕೊಳ್ಳಬಲ್ಲ ವಿಸ್ತೃತ ವ್ಯಾಖ್ಯಾನ ನೀಡುತ್ತಾ ವಿರಾಟ್ ಗಣಪನನ್ನು ನಮ್ಮ ಮುಂದಿರಿಸಿದರು.
ಹೀಗೆ ಗಣಪತಿ ಬಹುಪ್ರೀತ , ಬಹುಮಾನ್ಯ .ಕಿವಿ , ಹೊಟ್ಟೆಗಳ ವೈಶಾಲ್ಯದಲ್ಲಿ ಪ್ರಪಂಚ ವಿಶಾಲತೆ ಯನ್ನು ಪ್ರಕಟಿಸುತ್ತಾ ಈ ಕಾಲದ ದ್ವಂದ್ವ ಹಾಗೂ ವಿರೋಧಾಭಾಸದ ಪ್ರಾಪಂಚಿಕ ವ್ಯವಹಾರಗಳಿಗೆ ಉತ್ತರ ನೀಡುತ್ತಾನೆ.
~ಕೆ .ಎಲ್.ಕುಂಡಂತಾಯ