ಉಡುಪಿ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಮಂಗಳವಾರ ರಾತ್ರಿ ಅಯೋಧ್ಯೆ ತಲುಪಿದ್ದಾರೆ. ಬುಧವಾರ ಬೆಳಿಗೆ ಅಲ್ಲಿನ ಪೇಜಾವರ ಮಠದಲ್ಲಿ ಪ್ರಾತಃ ಪೂಜಾವಿಧಿಗಳನ್ನು ಮುಗಿಸಿದ ಬಳಿಕ ಪೇಜಾವರ ಶ್ರೀಗಳೊಂದಿಗೆ ಶ್ರೀ ರಾಮಮಂದಿರಕ್ಕೆ ತೆರಳಿ ಶ್ರೀರಾಮದೇವರ ದರ್ಶನ ಪಡೆದರು .ಯಾಗ ಶಾಲೆಯಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಯಜ್ಞದ ಪೂರ್ಣಾಹುತಿಯಲ್ಲಿ ಭಾಗವಹಿಸಿದರು .
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಬಳಿಕ ಶ್ರೀಗಳ ಮೊದಲ ಭೇಟಿ ಇದಾಗಿದೆ.