ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ೨೦೨೩-೨೪ರ ಸಾಲಿನ ೪೬ನೇ ವಾರ್ಷಿಕ ಮಹಾಸಭೆಯು ದಿನಾಂಕ ೧೬-೦೯-೨೦೨೪ರಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್‌ಪಾಲ್ ಎ ಸುವರ್ಣರವರ ಅಧ್ಯಕ್ಷತೆಯಲ್ಲಿ ಉಡುಪಿ ಪುರಭವನದಲ್ಲಿ ಜರುಗಿತು.
ಬ್ಯಾಂಕಿನ ಅಧ್ಯಕ್ಷ ಶ್ರೀ ಯಶ್‌ಪಾಲ್ ಎ ಸುವರ್ಣರವರು ಸರ್ವ ಸದಸ್ಯರನ್ನು ಸ್ವಾಗತಿಸಿ, ಬ್ಯಾಂಕ್ ನಿರಂತರ ೧೪ ವರ್ಷಗಳಿಂದ ಅತಿಹೆಚ್ಚು ಡಿವಿಡೆಂಡ್ ನೀಡುವ ಕರಾವಳಿ ಭಾಗದ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಕೃತ ಬ್ಯಾಂಕಿಗೆ ಸರಿಸಮನಾಗಿ ಡಿಜಿಟಲ್ ಬ್ಯಾಂಕಿ೦ಗ್ ತ್ರoಜ್ಞಾನ ದೊ೦ದಿಗೆ ಯುಪಿಐ ಸೌಲಭ್ಯವನ್ನು ಅಳವಡಿಸಿಕೊಂಡು ಗ್ರಾಹಕಸ್ನೇಹಿ ಸೇವೆ ನೀಡುತ್ತಿದೆ.
ಮಹಾಲಕ್ಷ್ಮೀ ಬ್ಯಾಂಕ್ ವ್ಯವಹಾರ ಕ್ಷೇತ್ರವನ್ನು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಹಾಸನ, ಮೈಸೂರು, ಮಂಡ್ಯ ಜಿಲ್ಲೆಗೆ ಈಗಾಗಲೇ ವಿಸ್ತರಿಸಲಾಗಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕ ರಾಜ್ಯದಾದ್ಯಂತ ಬ್ಯಾಂಕಿನ ಕಾರ್ಯಕ್ಷೇತ್ರವನ್ನು ವಿಸ್ತರಿಸುವ ಯೋಜನೆ ಹಾಗೂ ನೂತನ ಶಾಖೆಯನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಆರಂಭಿಸುವ ಯೋಜನೆಯು ಆಡಳಿತ ಮಂಡಳಿಯ ಮುಂದಿದೆ ಎಂದರು.
ವರದಿ ವರ್ಷದಲ್ಲಿ ಆದಾಯ ತೆರಿಗೆಗೆ ಹಾಗೂ ನಿಯಮದಂತೆ ಇತರ ಸಲುವಳಿಗಳಿಗೆ ಅನುವು ಮಾಡುವ ಮೊದಲು ರೂ. ೧೬.೭೩ ಕೋಟಿ ವ್ಯವಹಾರಿಕ ಲಾಭ ಗಳಿಸಿದ್ದು, ಹಾಗೂ ಅನುವು ಮಾಡಿದ ನಂತರ ರೂ. ೬.೬೦ ಕೋಟಿ ನಿವ್ವಳ ಲಾಭ ಗಳಿಸಿದ್ದು, ೨೦೨೩-೨೪ರ ವರ್ಷಾಂತ್ಯಕ್ಕೆ ಬ್ಯಾಂಕಿನ ಠೇವಣಿಯು ರೂ. ೫೩೨ ಕೋಟಿಗೆ ಹಾಗೂ ಸಾಲ ಮತ್ತು ಮುಂಗಡವು ರೂ. ೩೮೮ ಕೋಟಿಗೆ ತಲುಪಿದ್ದು ಬ್ಯಾಂಕಿನ ಒಟ್ಟು ವಹಿವಾಟು ರೂ. ೯೨೧.೧೨ ಕೋಟಿ, ದುಡಿಯುವ ಬಂಡವಾಳವು ರೂ. ೬೨೭.೫೨ ಕೋಟಿಗೆ ಏರಿಕೆಯಾಗಿದ್ದು, ಸಂಪನ್ಮೂಲ ನಿರ್ವಹಣೆಯಲ್ಲಿ ಉತ್ತಮ ಸ್ಥಿತಿಯಲ್ಲಿರುವುದನ್ನು ವಿವರಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯರಾದ ಡಾ| ಧನಂಜಯ ಸರ್ಜಿ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗವiದ ಅಧ್ಯಕ್ಷರಾದ ಶ್ರೀಮತಿ ಮಾಲಾ ಬಿ. ನಾರಾಯಣ ರಾವ್, ಉಡುಪಿ ನಗರಸಭೆಯ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕರಾದ ನೀರಜ ಎಸ್. ಸುವರ್ಣ, ನಮೃತ ಎಚ್. ಕುಂದರ್ ರವರಿಗೆ ಬ್ಯಾಂಕಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಮುಖ್ಯ ಅತಿಥಿಯಾಗಿದ್ದ ನಾಡೋಜ ಡಾ. ಜಿ. ಶಂಕರ್ ಮಾತನಾಡಿ ಯಶ್‌ಪಾಲ್ ಸುವರ್ಣ ನೇತೃತ್ಬದಲ್ಲಿ ಬ್ಯಾಂಕ್ ನಿರಂತರ ಪ್ರಗತಿ ಸಾಧಿಸುವ ಮೂಲಕ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿಯೂ ಬ್ಯಾಂಕ್ ರಾಜ್ಯದಾದ್ಯಂತ ಶಾಖೆಗಳನ್ನು ವಿಸ್ತರಿಸುವ ಮೂಲಕ ಗ್ರಾಹಕರಿಗೆ ಉತ್ತಮ ಸೇವೆ ನೀಡುವಂತಾಗಲಿ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಕರಾವಳಿ ಕರ್ನಾಟಕದ ಪ್ರತಿಷ್ಟಿತ ಸಹಕಾರಿ ಬ್ಯಾಂಕಾಗಿ ಗುರುತಿಸಿಕೊಂಡು ಯಶ್‌ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ಆದರ್ಶ ಸಹಕಾರಿ ವ್ಯವಸ್ಥೆಯನ್ನು ತಮ್ಮ ಕಾರ್ಯಚಟುವಟಿಕೆಯ ಮೂಲಕ ಅಳವಡಿಸಿಕೊಂಡು ಮಹಾಲಕ್ಷ್ಮೀ ಬ್ಯಾಂಕ್ ಸಹಕಾರಿ ಸಂಸ್ಥೆಗಳಿಗೆ ಮಾದರಿಯಾಗಿ ಮೂಡಿಬಂದಿರುವುದು ಶ್ಲಾಘನೀಯ ಎಂದರು.
ದಕ್ಷ ನಾಯಕತ್ವದ ಮೂಲಕ ಸಂಸ್ಥೆಯನ್ನು ಉನ್ನತ ಸಾಧನೆಯ ಪಥದಲ್ಲಿ ಕೊಂಡೊಯ್ಯಬಹುದು ಎಂಬುದನ್ನು ಮಹಾಲಕ್ಷ್ಮೀ ಬ್ಯಾಂಕಿನ ನಿರಂತರ ಪ್ರಗತಿಯ ಮೂಲಕ ಯಶ್‌ಪಾಲ್ ಸುವರ್ಣ ಸಾಧಿಸಿದ್ದಾರೆ, ಬ್ಯಾಂಕಿನ ಸಮಾಜಮುಖಿ ಕಾರ್ಯಗಳು ನಿತ್ಯ ನಿರಂತರವಾಗಲಿ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಶುಭ ಹಾರೈಸಿದರು.
ಬ್ಯಾಂಕಿನ ನಿವ್ವಳ ಲಾಭದಲ್ಲಿ ಸಹಕಾರ ಶಿಕ್ಷಣ ನಿಧಿಗೆ ರೂ.೯,೯೧,೩೭೧/-ರ ಚೆಕ್‌ನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಹಸ್ತಾಂತ ರಿಸಿದರು.
ಸಮಾರ೦ಭದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ. ಕುಂದರ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಮೀನುಗಾರ ಮುಖಂಡರಾದ ಆನಂದ ಪಿ. ಸುವರ್ಣ, ರಾಮಚಂದ್ರ ಕುಂದರ್, ಶಿವಪ್ಪ ಕಾಂಚನ್, ಗುಂಡು ಅಮೀನ್, ಮೋಹನ್ ಬೆಂಗ್ರೆ, ಬೇಬಿ ಸಾಲ್ಯಾನ್, ಉದಯ ಹಟ್ಟಿಯಂಗಡಿ, ಸುಮಿತ್ರ ಕುಂದರ್, ಸಹಕಾರಿ ಇಲಾಖೆಯ ಅಧಿಕಾರಿ ಸುಧೀರ್, ಬ್ಯಾಂಕಿನ ಉಪಾಧ್ಯಕ್ಷರಾದ ವಾಸುದೇವ ಸಾಲ್ಯಾನ್,.
ನಿರ್ದೇಶಕರುಗಳಾದ ಶಶಿಕಾಂತ ಬಿ ಕೋಟ್ಯಾನ್, ಶೋಭೇಂದ್ರ ಸಸಿಹಿತ್ಲು, ಕೆ ಸಂಜೀವ ಶ್ರೀಯಾನ್, ವಿನಯ ಕರ್ಕೇರ, ನಾರಾಯಣ ಟಿ ಅಮೀನ್, ಸುರೇಶ್ ಬಿ ಕರ್ಕೇರ, ಶಿವರಾಮ ಕುಂದರ್, ವನಜಾ ಜೆ ಪುತ್ರನ್, ಸದಾನಂದ ಬಳ್ಕೂರು, ವೃತ್ತಿಪರ ನಿರ್ದೇಶಕರಾದ ಮಂಜುನಾಥ ಎಸ್. ಕೆ, ಹಾಗೂ ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕರಾದ ಶ್ರೀ ಶರತ್ ಕುಮಾರ್ ಶೆಟ್ಟಿ ಎನ್ ಮೊದಲಾದವರು ಉಪಸ್ಥಿತರಿದ್ದರು.