Header Ads Widget

ಗೆಳೆಯರ ಬಳಗ, ಕಾರಂತ ಪುರಸ್ಕಾರ - 2024 ಪ್ರಶಸ್ತಿಗೆ ಡಾ. ನಾ. ಮೊಗಸಾಲೆ ಆಯ್ಕೆ


ಗೆಳೆಯರ ಬಳಗ(ರಿ.)ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ, ಕಾರಂತ ಪುರಸ್ಕಾರ - 2024 ಪ್ರಶಸ್ತಿಗೆ ಈ ನಾಡಿನ ಹಿರಿಯ ಸಾಹಿತಿ, ಸಂಘಟಕ, ಕವಿ, ಕಾದಂಬರಿಕಾರ, ಸಾಂಸ್ಕೃತಿಕ ಚಿಂತಕ, ಡಾ. ನಾ. ಮೊಗಸಾಲೆ ಆಯ್ಕೆಯಾಗಿದ್ದಾರೆ.

ಅತ್ಯಂತ ಗ್ರಾಮೀಣ ಪ್ರದೇಶವಾದ ಕಾಂತಾವರ ದಲ್ಲಿ ಕನ್ನಡ ಸಂಘ ಸ್ಥಾಪಿಸಿ ನಿರಂತರ ಚಟುವಟಿಕೆಯ ಮೂಲಕ ವಿಶ್ವ ಭೂಪಟದಲ್ಲಿ ಕಾಂತಾವರ ವನ್ನು ಗುರುತಿಸುವಂತೆ ಮಾಡಿದ ಡಾ. ಮೊಗಸಾಲೆ ಯವರ ಸಾಧನೆ ಅನನ್ಯ ವಾದುದು.ಕಾರಂತರಂತೆ ಸಂಘಟನೆ, ಸಾಹಿತ್ಯ ಕ್ಷೇತ್ರದಲ್ಲಿ ಅದರಲ್ಲೂ ಕಾದಂಬರಿಕಾರರಾಗಿ, ಕಥೆಗಾರರಾಗಿ ಕವಿಯಾಗಿ,ಮೊಗಸಾಲೆ ಯವರ ಸಾಧನೆ ಬೆಲೆಕಟ್ಟಲಾಗದು. ಈ ಹಿಂದೆ ಶ್ರೀಮತಿ ಮಾಲಿನಿ ಮಲ್ಯ,ಶ್ರೀ ಎಸ್. ನಾರಾಯಣ ರಾವ್,ಪೇತ್ರಿ ಮಾಧವ ನಾಯಕ್,ಶ್ರೀ ಶ್ರೀನಿವಾಸ ಸಾಸ್ತಾನ,ಶ್ರೀ ಹಿರಿಯಡ್ಕ ಗೋಪಾಲರಾವ್,ಶ್ರೀ ಎಚ್. ಇಬ್ರಾಹಿಂ ಸಾಹೇಬ್,ಶ್ರೀ ಪಾಂಡೇಶ್ವರ ಚಂದ್ರಶೇಖರ ಚಡಗ,ಶ್ರೀ ಬನ್ನಂಜೆ ಸಂಜೀವ ಸುವರ್ಣ,ಶ್ರೀಮತಿ ವೈದೇಹಿ,ಕಾರಂತ ಪುರಸ್ಕಾರ ಪಡೆದವರಾಗಿದ್ದಾರೆ.

ಈ ಪುರಸ್ಕಾರವು ಗೌರವಧನ ಹಾಗೂ ಸನ್ಮಾನ ಪತ್ರ, ಫಲಪುಷ್ಪ, ಶಾಲು ಇತ್ಯಾದಿಯಿಂದ ಕೂಡಿರುತ್ತದೆ.

ಗೆಳೆಯರ ಬಳಗ ಕಾರಂತ ಪುರಸ್ಕಾರ-2024 ನ್ನು ಅಕ್ಟೋ ಬರ್ ತಿಂಗಳ 19 ರ ಶನಿವಾರ ಸಂಜೆ ಕಾರ್ಕಡ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು .ಗಣ್ಯರ ಉಪಸ್ಥಿತಿಯಲ್ಲಿ ವಿತರಿಸಲಾಗುವುದು ಎಂದು ಬಳಗದ ಅಧ್ಯಕ್ಷ ಶ್ರೀ ಕೆ. ತಾರಾನಾಥ ಹೊಳ್ಳ ತಿಳಿಸಿದ್ದಾರೆ.