Header Ads Widget

ಪೊಲೀಸ್ ಇಲಾಖೆ ಕಾಂಗ್ರೆಸ್ ಕೈ ಗೊಂಬೆಯಂತೆ ವರ್ತಿಸುತ್ತಿದೆ~ ಶಶಾಂಕ್ ಶಿವತ್ತಾಯ

  


ಉಡುಪಿ : ಬಾಂಗ್ಲಾ ಪ್ರಧಾನಿಗೆ ಬಂದ ಪರಿಸ್ಥಿತಿ ಕರ್ನಾಟಕ ರಾಜ್ಯಪಾಲರಿಗೂ ಬರಬಹುದು ಎಂದ ಎಂಎಲ್.ಸಿ ಐವನ್‌ ಡಿ'ಸೋಜಾ ವಿರುದ್ಧ ಯಾವುದೇ ಕ್ರಮವಿಲ್ಲ. 

ಆದರೆ, ಘೋಷಣೆಯಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರದ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದ ಉಡುಪಿ ಶಾಸಕರ ವಿರುದ್ಧ ಪ್ರಕರಣ ದಾಖಲಿದ ಪೋಲೀಸ್‌ ಇಲಾಖೆ ಕಾಂಗ್ರೆಸ್ ಕೈಗೊಂಬೆ ಯಂತೆ ವರ್ತಿಸುತ್ತಿದೆ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.


ಕುಂದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅವರಿಗೆ ಘೋಷಿಸಲಾಗಿದ್ದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿಯನ್ನು ಒತ್ತಡಕ್ಕೆ ಮಣಿದು


ಕುಂದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅವರಿಗೆ ಘೋಷಿಸಲಾಗಿದ್ದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿಯನ್ನು ಒತ್ತಡಕ್ಕೆ ಮಣಿದು ಪ್ರಶಸ್ತಿ ತಡೆಹಿಡಿದ ಸರ್ಕಾರದ ಧೋರಣೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮಣಿಪಾಲದಲ್ಲಿ ನಡೆಸಿದ ಪ್ರತಿ ಭಟನೆಯಲ್ಲಿ ಭಾಗವಹಿಸಿದ್ದ ಉಡುಪಿ ಶಾಸಕ ಯಶಪಾಲ್‌ ಸುವರ್ಣ ಸಹಿತ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹಾಗೂ ಬಿಜೆಪಿಯ ಇತರ ನಾಯಕರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಉಡುಪಿ ಜಿಲ್ಲಾ ಯುವ ಮೋರ್ಚಾ ಬಲವಾಗಿ ಖಂಡಿಸುತ್ತದೆ ಎಂದು ಶಶಾಂಕ್ ಶಿವತ್ತಾಯ ತಿಳಿಸಿದ್ದಾರೆ.