ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ, ಎಸ್. ಎನ್. ವಿ ಪದವಿ ಪೂರ್ವ ಕಾಲೇಜು, ಕಾರ್ಕಳ ಇವರ ಆಶ್ರಯದಲ್ಲಿ ನಡೆದ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯ 36 ಕೆ. ಜಿ ವಿಭಾಗದಲ್ಲಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು ಮಿಯ್ಯಾರು, ಕಾರ್ಕಳ ಇಲ್ಲಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾದ ಶ್ರಾವಣಿ (ಕಮಲಶಿಲೆ ಶ್ರೀಮತಿ ಶಾಲಿನಿ &ಗಣೇಶ ಕೊಠಾರಿ ದಂಪತಿಗಳ ಮಗಳು) ಇವರು ಬಾಲಕಿಯರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.