Header Ads Widget

ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ

 


ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ ಉಡುಪಿ ಜಿಲ್ಲೆ ಆಯೋಜನೆಯ ಸಂಗೊಳ್ಳಿ ರಾಯಣ್ಣರ 228ನೇ ಜನ್ಮದಿನೋತ್ಸವದ ಪ್ರಯುಕ್ತ ಕನ್ನಡ ನಾಡು ನುಡಿ ಸಂಸ್ಕೃತಿ ಮತ್ತು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಗಾಗಿ 'ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024 ' ನ್ನು ಉಡುಪಿಯ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಇದೇ ಬರುವ

 ಸೋಮವಾರ 16 ಸೆಪ್ಟೆಂಬರ್ ಸಂಜೆ 6:30ಕ್ಕೆ  ಶೇಷಶಯನ ಬಾಲ್ಕನಿ ಸಭಾಂಗಣ ಹೋಟೆಲ್ ಕಿದಿಯೂರು ಉಡುಪಿಯಲ್ಲಿ ಪ್ರದಾನ ಮಾಡಲಾಗುವುದು ಎಂದು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ, ದಕ. ಇದರ ಅಧ್ಯಕ್ಷ ಸಿದ್ಧ ಬಸಯ್ಯ ಸ್ವಾಮಿ ಚಿಕ್ಕಮಠ  ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.