ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ದೆಹಲಿ ಸಿಎಂ ಮಾಡುವುದೊಂದೇ ನನ್ನ ಕೆಲಸ ಎಂದು ದೆಹಲಿಯ ನೂತನ ಮುಖ್ಯಮಂತ್ರಿ ಅತಿಶಿ ಮರ್ಲೇನ ಹೇಳಿದ್ದಾರೆ.
ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಶನಿವಾರ ಮೊದಲ ಪತ್ರಿಕಾಗೋಷ್ಠಿ ನಡೆಸಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಿತೂರಿ ನಡೆಸಿತು.
ಅವರನ್ನು 6 ತಿಂಗಳು ಜೈಲಿನಲ್ಲಿ ಇರಿಸಿತು, ಅವರನ್ನು ನಾಶ ಮಾಡಲು ಪ್ರಯತ್ನಿಸಿತು. ಆದರೆ, ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿತು. ಇ.ಡಿ. ಮತ್ತು ಸಿಬಿಐ ಕೇಂದ್ರ ಸರ್ಕಾರದ ಗಿಳಿಗಳಾಗಿವೆ.