Header Ads Widget

 . 

ಭಾರತದ ನವ ನಿಮಾ೯ಣದ ಕೆಲಸ ಮಾಡುವ ಕನಸುಗಾರ ಮೋದಿ 

ಮೋದಿ ಅವರು ಪ್ರಧಾನಿಯಾಗಿ ಸಾಥ೯ಕ ಹತ್ತು ವರ್ಷ ಪೂರ್ಣಗೊಳಿಸಿದ್ದಾರೆ. ಸತತ 3ನೇ ಬಾರಿ ಗೆ ಪ್ರಧಾನಿಯಾದ ಮೊದಲ ಕಾಂಗ್ರೆಸೇ ತರ ವ್ಯಕ್ತಿಯಾಗಿದ್ದಾರೆ

ಅವರಿಗೆ ಸಿಕ್ಕಿರುವ ಪ್ರಶಂಸೆಯ ಮಾತುಗಳು, ಅವರ ಮಾತುಗಳಿಗೆ ಇರುವ ವಿಶೇಷ ಮನ್ನಣೆ ಜಗತ್ತಿನ ವಿವಿಧ ದೇಶಗಳೊಂದಿಗೆ ಇರುವ ರಾಜತಾಂತ್ರಿಕ ಸಂಬಂಧಗಳು  ರಾಷ್ಟ್ರನಾಯಕ ರಾಗಿದ್ದ ಅವರನ್ನು  ವಿಶ್ವನಾಯಕ ಆಗಿ   ಮಾಡಿವೆ.


 ಮೋದಿ ಅವರ ಜನಪ್ರಿಯತೆ ಎಷ್ಟಿದೆಯೆಂದರೆ, ತಮಗೆ ಮೋದಿ ಅವರ ಹಸ್ತಾಕ್ಷರ ಕೇಳಬೇಕು ಅನ್ನಿಸುತ್ತಿದೆ ಎಂದು ಅಮೇರಿಕಾ ಅಧ್ಯಕ್ಷ ಬೈಡನ್ ಇತ್ತಿಚೆಗೆ ಸಭೆಯಲ್ಲಿ ಹೇಳಿದ್ದರು ಇದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ.


 ಅಮೆರಿಕದ ಗಾಯಕ ಬ್ರೂಸ್ ಸ್ಪ್ರಿಂಗ್‌ಸ್ಟೀನ್‌ ಅವರಿಗೂ ಸಿಡ್ನಿ ಕ್ರೀಡಾಂಗಣದಲ್ಲಿ ಮೋದಿ ಅವರಿಗೆ ಸಿಕ್ಕಂತಹ ಸ್ವಾಗತ ದೊರೆತಿರಲಿಲ್ಲ ಎಂದು ಆಸ್ಟೇಲೀಯಾ ಪ್ರಧಾನಿ ಆಲ್ಬನೀಸ್ ಹೇಳಿದರು. ಕ್ರೀಡಾಂಗಣದಲ್ಲಿ ಸೇರಿದ್ದ 20 ಸಾವಿರ ಜನರ ಎದುರು ಆಲ್ಬನೀಸ್ ಅವರು ಮೋದಿ ಅವರನ್ನು ‘ದಿ ಬಾಸ್’ ಎಂದು ಕರೆದಿದ್ದರು ಇದು ಮೋದಿಯವರ ಜನಪ್ರಿಯ  ತೆಗೆ ಹಿಡಿದ ಕೈಗನ್ನಡಿ ಯಾಗಿದೆ. 


ಇವರಿಬ್ಬರ ಮಾತುಗಳಿಗಿಂತ ಹೆಚ್ಚು ಆಶ್ಚರ್ಯ ಉಂಟುಮಾಡಿದ್ದು ಜಿ.20 ಸಭೆಯಲ್ಲಿ ಅಪ್ರಿಕಾ ದ ಮರಪೆ ಅವರ ನಡೆ. ಅವರು ಮೋದಿ ಅವರ ಕಾಲು ಮುಟ್ಟಿ ಗೌರವ ಸಮರ್ಪಿಸಿದರು. ಈ ನಡೆಯು ಭಾರತೀಯ ರನ್ನು ಬೆರಗಾಗಿಸಿತು. ಏಕೆಂದರೆ ಭಾರತದ ಪ್ರಧಾನಿಗೆ ಬೇರೆ ದೇಶಗಳ ನಾಯಕರು ಯಾವತ್ತೂ ಈ ರೀತಿಯಲ್ಲಿ ಗೌರವ ಸಮರ್ಪಿಸಿದ್ದನ್ನು ಕಂಡಿರಲಿಲ್ಲ.

 ಭಾರತದ ಹಿಂದಿನ ಯಾವ ಪ್ರಧಾನಿಯ ಬಗ್ಗೆಯೂ ಜಾಗತಿಕ ನಾಯಕರು ಈ ರೀತಿಯಲ್ಲಿ ಪ್ರಶಂಸೆಯ ಮಾತುಗಳನ್ನು ಆಡಿದ ನಿದರ್ಶ ನವಿಲ್ಲ. ಭಾರತದ ವಿದೇಶಾಂಗ ನೀತಿಗೆ ಸ್ಪಷ್ಟ ದಿಕ್ಕು ತೋರಿಸಿದ್ದಕ್ಕೆ ಹಾಗೂ ಜಾಗತಿಕ ವೇದಿಕೆಗಳಲ್ಲಿ ತಾವು ನಡೆದುಕೊಂಡ ಬಗೆಗೆ ಮೋದಿ ಅವರಿಗೆ ಶ್ರೇಯಸ್ಸು ಸಲ್ಲಬೇಕು.


 *ಅನಿವಾಸಿ ಭಾರತೀಯರ ಪಾಲಿಗೆ ಹಿರೋ* - 

ನ್ಯೂಯಾರ್ಕ್‌, ಟೆಕ್ಸಾಸ್‌, ಸಿಡ್ನಿ... ಹೀಗೆ ಬೇರೆ ದೇಶಗಳಲ್ಲಿ ವಾಸಿಸುತ್ತಿರುವ ಭಾರತೀಯರು ಹಾಗೂ ಭಾರತ ಮೂಲದವರು ಭಾರತದ ಯಾವ ಪ್ರಧಾನಿಯನ್ನೂ ಇಷ್ಟೊಂದು ಉತ್ಸಾಹ ದಿಂದ ಸ್ವಾಗತಿಸಿದ ಉದಾಹರಣೆ ಇಲ್ಲ. ಈಗ ಆಗುತ್ತಿರುವುದು ನಿಜಕ್ಕೂ ಅಭೂತಪೂರ್ವ.

ಆರು ವರ್ಷಗಳ ಹಿಂದೆ ಅಮೆರಿಕದ ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ಹೋಗಿದ್ದಾಗ ಮೋದಿ ಅವರನ್ನು ಅಲ್ಲಿನ ಸದಸ್ಯರು ಎದ್ದು ನಿಂತು ಆರು ನಿಮಿಷಗಳ ಕಾಲ ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದರು. ಈ ಘಟನೆಗೆ ಜನತೆ ಮರೆಯಲು ಅಸಾಧ್ಯ.

ಮೋದಿ ಅವರಿಗೆ ಸಿಕ್ಕ ಗೌರವವನ್ನು ನೋಡಿ  ಯೇ ನಂಬಬೇಕಿತ್ತು. ಇವೆಲ್ಲವುಗಳ ಅರ್ಥ ವೇನು? ಕಳೆದ ಒಂಬತ್ತು ವರ್ಷಗಳಲ್ಲಿ ಮೋದಿ ಅವರು ಜನಪ್ರಿಯತೆಯ ಏಣಿಯನ್ನು ನಿಧಾನ ವಾಗಿ ಹಾಗೂ ದೃಢವಾಗಿ ಏರಿದ್ದಾರೆ.


 *ಮಾದರಿಯಾದ ವಿದೇಶಾಂಗ ನೀತಿ* :-ಮೋದಿ ಅವರು ಭಾರತದ ವಿದೇಶಾಂಗ ನೀತಿಯನ್ನು ‘ಭಾರತಕ್ಕೆ ಹೆಚ್ಚು ಸೂಕ್ತವಾಗುವ’ ರೀತಿಯಲ್ಲಿ ಬದಲಾಯಿಸಿರುವುದು; ರಷ್ಯಾ ಮತ್ತು ಅಮೆರಿಕದ ಜೊತೆ ಭಾರತದ ಸಂಬಂಧ ವನ್ನು ತೂಗಿಸಿಕೊಂಡು ಹೋಗುತ್ತಿರುವುದು; ಚೀನಾವನ್ನು ಅವರು ನಿಭಾಯಿಸುತ್ತಿರುವ ಬಗೆ; ಇಂಡೊ–ಪೆಸಿಫಿಕ್ ಪ್ರದೇಶದಲ್ಲಿ ಭಾರತದ ಹಿತಾಸಕ್ತಿಯನ್ನು ಕಾಯುವ ಉದ್ದೇಶದಿಂದ ಕ್ವಾಡ್ ಒಕ್ಕೂಟಕ್ಕೆ ತೋರಿರುವ ಬದ್ಧತೆ, ದೇಶದ ಮಿಲಿಟರಿ ಶಕ್ತಿಯನ್ನು ಹೆಚ್ಚಿಸಲು ಆದ್ಯತೆ ಹಾಗೂ ರಕ್ಷಣಾ ಉಪಕರಣಗಳ ತಯಾರಿಕೆಯು ಭಾರತದ ಲ್ಲಿಯೇ ಆಗಬೇಕು ಎಂಬ ಗುರಿ... ಇವೆಲ್ಲ ನಿಜಕ್ಕೂ ಅಸಾಮಾನ್ಯ ಹಾಗೂ ಅಭೂತ ಪೂರ್ವ. 


ರಕ್ಷಣಾ ವಲಯದಲ್ಲಿ ಬೇರೆ ಬೇರೆ ದೇಶಗಳಿಂದ‘ ರಕ್ಷಣಾ ಸಾಮಾಗ್ರಿ ಗಳನ್ನು ತರಿಸಿಕೊಳ್ಳಲಾಗು ತ್ತಿತ್ತು ಆದರೆ ಇಂದು ಆ ಸ್ಥಿತಿ ಇಲ್ಲ *ಭಾರತದ ಲ್ಲಿಯೇ ತಯಾರಿಸಿ’* ಕಾರ್ಯ ಕ್ರಮವು ಈ ಹಿಂದೆ ಇಷ್ಟೊಂದು ಆದ್ಯತೆಯನ್ನು ಪಡೆದಿರಲೇ ಇಲ್ಲ.

ಉಕ್ರೇನ್‌ ಬಿಕ್ಕಟ್ಟನ್ನು ಮೋದಿ ಅವರು ನಿಭಾ ಯಿಸಿದ ರೀತಿಯು ನಿಜಕ್ಕೂ ಗುರುತಿಸ ಬೇಕಾದಂಥದ್ದು. 

ಅಮೆರಿಕವು ರಷ್ಯಾ ವಿರುದ್ಧ ಆರ್ಥಿಕ ನಿರ್ಬಂಧಗಳನ್ನು ಹೇರುತ್ತಿ ದ್ದರೂ, ರಷ್ಯಾದ ಜೊತೆಗಿನ ಸ್ನೇಹವನ್ನು ಕಾಪಾಡಿಕೊಂಡು, ಪೆಟ್ರೋಲಿಯಂ ಉತ್ಪನ್ನಗಳ ಪೂರೈಕೆಯು ಸ್ಥಿರವಾಗಿ ಇರುವಂತೆ ಮೋದಿ ನೋಡಿಕೊಂಡಿದ್ದಾರೆ. 

ಇದು ತಂತಿಯ ಮೇಲಿನ ನಡಿಗೆಯೇ ಸೈ. ಅಲ್ಲದೆ, ಮೋದಿ ಅವರು ಉಕ್ರೇನ್‌ಗೆ ಮಾನವೀಯ ನೆರವು ಒದಗಿಸುವ ವಿಚಾರದಲ್ಲಿ ಬದ್ಧತೆ ತೋರಿದ್ದಾರೆ. ನೆರವಿನ ಹಸ್ತಕ್ಕೆ ಪ್ರತಿಕ್ರಿಯೆ ನೀಡಿರುವ ಉಕ್ರೇನ್‌ನ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಮೋದಿ ಅವರಿಗೆ ಧನ್ಯವಾದ ಹೇಳಿದ್ದನ್ನು ಮರೆಯು ವಂತಿಲ್ಲ.


ದೆಹಲಿ ಜಿ.20 ಸಭೆ ಹೊಸ ಮೈಲಿಗಲ್ಲು: ದೆಹಲಿ ಯಲ್ಲಿ ನಡೆದ ಜಿ.20 ಸಭೆ ಮೋದಿ ಯವರ ಇವೆಂಟ್ ಮ್ಯಾನೆಜ್ ಮೆಂಟ್ ಗೆ ಹಿಡಿದ ಕನ್ನಡಿ ಯಾಗಿದೆ.ದೆಹಲಿ ಸೂಚಿಗೆ ಎಲ್ಲರ. ಒಪ್ಪಿಗೆ ಪಡೆದಿದ್ದು, ದಾಖಲೆಯೇ ಸರಿ ಅದೇ ರೀತಿ ಭಾರತದ ಗತ ವೈಭವದ ಇತಿಹಾಸ ಸಾರುವ ವಿವಿಧ ಮಾದರಿಗಳ ಎದುರು ಸಭೆ ಎಲ್ಲವೂ ಅದ್ಬುತ.


ಕಾಶ್ಮೀರ 370 ವಿಧಿ ತೆಗೆದಿರುವುದು, ಒಂದೇ ಭಾರತ ರೈಲು ಸೇವೆ, ದೇಶದಲ್ಲಿ ರೈಲು, ರಸ್ತೆ, ವಿಮಾನ ನಿಲ್ದಾಣ ನಿಮಾ೯ಣ ಸೇರಿದಂತೆ ಅನೇಕ ಅಭಿವೃದ್ಧಿ ಕಾಯ೯ಕ್ರಮಗಳು ಅವರ ಕಾಯ೯ ಶೈಲಿಗೆ ಉತ್ತಮ ಉದಾಹರಣೆ.

 ಸಾಧನೆ ಮಾತಾಗಿದೆ:- ನೆಹರೂ ಚಿಂತನೆಗಳ ನೆಲೆಯಲ್ಲಿ ದಶಕಗಳಿಂದ ಬೆಳೆದುಬಂದಿರುವ ಭಾರತೀಯ ವಿದೇಶಾಂಗ ಸೇವೆಯಲ್ಲಿನ ಆಲೋಚನಾ ಕ್ರಮವನ್ನು ಕೂಡ ಮೋದಿ ಅವರು ಬದಲಾಯಿಸಿದ್ದಾರೆ.

 ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರ ಮಾತು ಹಾಗೂ ಅವರ ನಡೆಯಲ್ಲಿ ಈ ಹೊಸ ಆಲೋಚನಾ ಕ್ರಮವು ಸ್ಪಷ್ಟವಾಗಿ ಕಾಣಿಸುತ್ತಿದೆ. ಜೈಶಂಕರ್ ಅವರು ಪಾಕಿಸ್ತಾನ ಹಾಗೂ ಚೀನಾದ ಸ್ವೀಕಾರಾರ್ಹ ವಲ್ಲದ ನಡೆಗಳ ಬಗ್ಗೆ ಹಲವು ವೇದಿಕೆಗಳಲ್ಲಿ, ಹಲವು ಸಂದರ್ಭಗಳಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ.


ಆದರೆ ಮೋದಿ ಅವರನ್ನು ವಿರೋಧಿಸುವವರ ಮನಃಸ್ಥಿತಿ ಅದೆಷ್ಟು ಕೆಟ್ಟದ್ದಾಗಿ ಇದೆಯೆಂದರೆ, ವಿದೇಶಾಂಗ ವ್ಯವಹಾರಗಳ ಮಾಜಿ ಸಚಿವ ಯಶವಂತ ಸಿನ್ಹಾ ಅವರು ಮುಂದಿನ ಚುನಾ ವಣೆಯಲ್ಲಿ ಪಪುವಾ ನ್ಯೂ ಗಿನಿಯಿಂದ ಬಿಜೆಪಿ ಟಿಕೆಟ್ ಕೇಳುವುದಾಗಿ ವ್ಯಂಗ್ಯ ವಾಡಿದ್ದಾರೆ. 

ಮೋದಿ ಅವರು ಪ್ರಧಾನಿ ಯಾದ ಹೊತ್ತಿನಿಂದ ವಿರೋಧ ಪಕ್ಷಗಳ ಟೀಕೆಗಳಲ್ಲಿ ನಕಾರಾತ್ಮಕತೆ ತುಂಬಿಕೊಂಡಿದೆ. 2014ರಲ್ಲಿ ಮೋದಿ ಅವರು ಮ್ಯಾನ್ಮಾರ್‌ಗೆ ಭೇಟಿ ನೀಡಿ, ಅಲ್ಲಿ 20 ಸಾವಿರ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾಗ ವಿರೋಧ ಪಕ್ಷದ ನಾಯಕರೊಬ್ಬರು, ‘ಮೋದಿ ಅವರು ಚಪ್ಪಾಳೆ ತಟ್ಟಲು ಭಾರತದಿಂದ ಜನರನ್ನು ಕರೆದೊಯ್ದಿದ್ದಾರೆ’ ಎಂದು ಹೇಳಿದ್ದರು. ಕೈಗೆಟು ಕದ ದ್ರಾಕ್ಷಿ ಹುಳಿ ಎಂಬುದು ನಮಗೆಲ್ಲರಿಗೂ ಗೊತ್ತಿದೆ.

ಮೋದಿ ಅವರ ಅವಧಿಯಲ್ಲಿನ ಭಾರತವು ಆತ್ಮನಿರ್ಭರವಾಗಿದೆ. 

ಭಾರತ ಇದೀಗ ಚಂದ್ರಲೋಕಕ್ಕೂ ಕಾಲಿಟ್ಟಿದೆ. ಜಗತ್ತಿನ ಯಾವುದೇ ದೇಶಗಳಿಗೂ ಪೈಪೋಟಿ ನೀಡುವಂತಹ ಸಾಧನೆ ಅವರಿಂದಾಗಿದೆ.

ಒಟ್ಟಾಗಿ ಮೋದಿಯವರಿಗೆ ಸಾಟಿ ಯಾಗುವ ನಾಯಕ ಯಾರೂ ಇಲ್ಲ. ಸೆ.17 ಅವರ ಜನ್ಮದಿನ ಈ ದಿನ ಅವರಿಗೆ ಅಭಿನಂದನೆ ಸಲ್ಲಿಸುತ್ತಾ , ಮೋದಿಯವರ ವ್ಯಕ್ತಿತ್ವ ನಮಗೆ ಮಾದರಿಯಾಗಲಿ 

ಜೈ ಹೋ'


✍🏻 *ರಾಘವೇಂದ್ರ ಪ್ರಭು, ಕವಾ೯ಲು* ಸಂ.ಕಾಯ೯ದಶಿ೯ ಕ .ಸಾ.ಪ ಉಡುಪಿ