Header Ads Widget

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 475 ಕೋಟಿ ಬಿಡುಗಡೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಕೇಂದ್ರ ಸರ್ಕಾರದ ಮೂಲಕ ಕರ್ನಾಟಕ ರಾಜ್ಯಕ್ಕೆ ಹಿಂದಿನ ವರ್ಷಗಳ ವಸತಿ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ದಿ೦ದ ಗ್ರಾಮೀಣ ವಸತಿ ಯೋಜನೆಗೆ 400 ಕೋಟಿ ಮತ್ತು ನಗರ ವಸತಿ ಯೋಜನೆಗೆ 75 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾದ ಬಗ್ಗೆ ಉಡುಪಿ-ಚಿಕ್ಕಮಗಳೂರಿನ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ ಜಿಲ್ಲೆಯ, ನಗರ ಸ್ಥಳೀಯಾಡಳಿತದ ಪುರಸಭೆ, ಪಟ್ಟಣ ಪಂಚಾಯತ್ ಮತ್ತು ನಗರಸಭೆ ಅಧಿಕಾರಿಗಳ ಸಭೆಯಲ್ಲಿ ತಿಳಿಸಿದ್ದಾರೆ.


ನಗರಾಡಳಿತ ಸಂಸ್ಥೆಗಳ ವಾಜಪೇಯಿ ವಸತಿ ಯೋಜನೆ ಮತ್ತು ಅಂಬೇಡ್ಕರ್ ವಸತಿ  ಯೋಜನೆಯ ಪ್ರಗತಿ ಪರಿಶೀಲನೆಯನ್ನು ಸಂಸದರ ಕಚೇರಿಯಲ್ಲಿ ಪರಿಶೀಲಿಸಿದ ಕೋಟ ಸಾದ್ಯವಾದಷ್ಟು ಬೇಗ ವಸತಿ ಯೋಜನೆ ಯ ಪ್ರಗತಿಯನ್ನು ಮಾಡಿ ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡಲು ಸುಚಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿರುವ ಉಡುಪಿ ನಗರಸಭೆ, ಕುಂದಾಪುರ ಪುರಸಭೆ, ಕಾರ್ಕಳ ಪುರಸಭೆ, ಬೈಂದೂರು ಪಟ್ಟಣ ಪಂಚಾಯತ್, ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಗಳ ಜೊತೆ ಮಾಲೋಚಿಸಿ, ಮಾಹಿತಿಯನ್ನು ಪಡೆದಿದ್ದು, ಶೇ. 80ರಷ್ಟು ಮಾತ್ರ ಬಡವರ ವಸತಿ ಯೋಜನೆಯು ಅನುಷ್ಠಾನವಾಗಿದ್ದು, ಉಳಿಕೆ ಮನೆ  ಗಳ ಪ್ರಗತಿಯನ್ನು ಕೂಡಲೆ ಪರಿಶಿಲಿಸಿ, ಪೂರ್ಣ ಪ್ರಮಾಣದಷ್ಟು ಬಡವರ ವಸತಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸಂಬ0ಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಿ.ಎಂ ಸ್ವ-ನಿಧಿ ಯೋಜನೆಯ ಅನುಷ್ಠಾನಕ್ಕೆ ಸೂಚನೆ: ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಬೀದಿ ವ್ಯಾಪಾರಿಗಳು ಮತ್ತು ಸಣ್ಣ ಪುಟ್ಟ ವ್ಯಾಪಾರಿಗಳಿಗೆ ಪಿ.ಎಂ ಸ್ವ-ನಿಧಿ ಯೋಜನೆಯನ್ನು ಗರಿಷ್ಠ ಪ್ರಮಾಣದಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಡಿಸಬೇಕೆಂದು ಸಭೆಯಲ್ಲಿನ ಅಧಿಕಾರಿಗಳಿಗೆ ಸೂಚಿಸಿದರಲ್ಲದೇ ಈ ಬಗ್ಗೆ ಅರ್ಜಿ  ಅಹ್ವಾನಿಸಿ ರಾಷ್ಟ್ರೀಕೃತ ಬ್ಯಾಂಕಿನ ಮೂಲಕ ಸಾಲ ಸೌಲಭ್ಯ ಒದಗಿಸಲು ಶಿಫಾರಸ್ಸು ಮಾಡು ವಂತೆ ನಗರಾಡಳಿತ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಲ್ಲದೇ, ಅಕ್ಟೋಬರ್ ಮೊದಲ ವಾರದೊಳಗೆ ಸ್ವ-ನಿಧಿ ಯೋಜನೆಯ ಪೂರ್ಣ ಪ್ರಮಾಣದ ಅನುಷ್ಠಾನವನ್ನು ಮಾಡಿ, ಫಲಾನುಭವಿಗಳಿಗೆ ಯೋಜನೆಯ ಉಪಯೋಗ ಪಡೆಯಲು ಕ್ರಮತೆಗೆದುಕೊಳ್ಳಬೇಕೆಂದು ಸುಚಿಸಿದರು. ಸಭೆಯಲ್ಲಿ ಉಡುಪಿ ನಗರಸಭೆ, ಕಾಪು ಪುರಸಬೆ, ಕಾರ್ಕಳ ಪುರಸಭೆ, ಕುಂದಾಪುರ ಪುರಸಭೆ, ಬೈಂದೂರು ಪಟ್ಟಣ ಪಂಚಾಯತ್ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಗಳು, ವಸತಿ ಯೋಜನೆಯ ನೋಡಲ್ ಅಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರವೀಂದ್ರ ಇವರು ಉಪಸ್ಥಿತರಿದ್ದರು.