Header Ads Widget

ಸುಳ್ಳನ್ನು ಸತ್ಯ ಮಾಡುವುದೇ RSS ತರಬೇತಿ: ದಿನೇಶ್ ಗುಂಡೂರಾವ್


ಮಂಗಳೂರು: ಸುಳ್ಳನ್ನು ಸತ್ಯ ಮಾಡುವುದೇ ಆರ್.ಎಸ್.ಎಸ್ ನ ತರಬೇತಿಯಾಗಿದೆ. ಆರ್ ಎಸ್ ಎಸ್ ಇದನ್ನೇ ತರಬೇತಿ ಕೊಡುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮೈಸೂರು ಮೂಡಾ ಹಗರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಆದೇಶ ಕಾಯ್ದಿರಿಸಿದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಾಸಿಕ್ಯೂಶನ್ ವಿಚಾರ ನ್ಯಾಯಾಲಯ ತೀರ್ಮಾನಿಸುತ್ತದೆ, ಆದರೆ, ರಾಜ್ಯಪಾಲರ ಪಕ್ಷಪಾತಿ ನಡೆ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಅಧಿಕಾರ ದುರುಪಯೋಗ ಮಾಡಿಲ್ಲ, ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಬಿಜೆಪಿಯವರು ಸುಮ್ಮನೆ ಬೊಬ್ಬೆ ಹಾಕಿ ಸುಳ್ಳನ್ನು ಸತ್ಯ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಎಂದರು

ಸುಳ್ಳನ್ನು ಸತ್ಯ ಮಾಡುವುದೇ ಆರ್.ಎಸ್.ಎಸ್ ನ ತರಬೇತಿಯಾಗಿದೆ. ಆರ್ ಎಸ್ ಎಸ್ ಇದನ್ನೇ ತರಬೇತಿ ಕೊಡುವುದು, ಯಾವ ರೀತಿ ಪ್ರಚೋದನೆ ಮಾಡಬೇಕು, ಗಲಾಟೆ ಎಬ್ಬಿಸಬೇಕು, ದಂಗೆ ಮಾಡಬೇಕೆಂದು ತರಬೇತಿ ನೀಡುತ್ತಾರೆ ಎಂದು ಟೀಕಿಸಿದರು. ನಮಗೆ ಯಾವುದೇ ಭಯ ಇಲ್ಲ ಎಂದು ಹೇಳಿದರು.