ಕಾರು ಢಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿಯಲ್ಲಿ ಬುಧವಾರ(ಅ9) ನಡೆದಿದೆ.
ಮೃತ ದುರ್ದೈವಿ ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ. ಇಂದ್ರಾಳಿ ದೇವಸ್ಥಾನದಿಂದ ಕಾರು ಕೆಳಗೆ ಬರುತ್ತಿದ್ದ ವೇಳೆ ಬ್ರೇಕ್ ಫೇಲ್ ಆಗಿದ್ದು, ಎರಡೂ ಬದಿಯಲ್ಲಿದ್ದ ವಾಹನಗಳು ಸಹಿತ ಜನರಿಗೆ ಕಾರು ಢಿಕ್ಕಿ ಹೊಡೆದಿದ್ದು, ಕೆಲ ಮಂದಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.