Dee-Tee(ಭವಾನಿ) ಲಾಡ್ಜಿಂಗ್ ಅಂಡ್ ರೆಸ್ಟೋ ರೆಂಟ್ ಗೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯಲ್ಲಿ ಒಟ್ಟು ಐದು ಪ್ರಕರಣ ದಾಖಲಾಗಿರುತ್ತದೆ. 7th Heaven ಬಾರ್ ಅಂಡ್ ರೆಸ್ಟೋರೆಂಟ್ ಗೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯಲ್ಲಿ 2024ನೇ ಸಾಲಿನಲ್ಲಿ ಡಿಜೆ ಬಳಸಿ ಪಾರ್ಟಿ ನಡೆಸುತ್ತಿರುವ ಬಗ್ಗೆ ದಾಖಲಾದ ಒಂದು ಪ್ರಕರಣ ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು, ಮುಂಬೈಯಲ್ಲಿ ಒಂದು ಪ್ರಕರಣ ಹಾಗೂ ಅಬಕಾರಿ ಇಲಾಖೆಯಿಂದ ಒಂದು ಪ್ರಕರಣ ದಾಖಲಾಗಿರುತ್ತದೆ.
ಅದರಂತೆ ಉಡುಪಿ ನಗರಸಭೆ ವ್ಯಾಪ್ತಿಯ ಮಣಿಪಾಲದ ಈಶ್ವರ ನಗರದಲ್ಲಿರುವ ಕಟ್ಟಡ ಸಂಖ್ಯೆ 4-94E4 ರಲ್ಲಿ ನಡೆಸುತ್ತಿರುವ Dee-Tee(ಭವಾನಿ) ಲಾಡ್ಜಿಂಗ್ & ರೆಸ್ಟೋರೆಂಟ್ ಹಾಗೂ ನಗರಸಭಾ ವ್ಯಾಪ್ತಿಯ ಕಟ್ಟಡ ಸಂಖ್ಯೆ 2-7E, E1, E2, E3, E4, E5ರಲ್ಲಿ ಶಾಂಭವಿ ಅಸೋಸಿಯೇಟ್ಸ್ ನ 7th ಹೆವಿನ್ (Ecsta ys), ಬಾರ್ & ರೆಸ್ಟೋರೆಂಟ್ ಎಂಬ ಹೆಸರಿನ ಉದ್ದಿಮೆಗಳ ಪರವಾನಿಗೆಯನ್ನು ನಗರಸಭಾ ವತಿಯಿಂದ ರದ್ದುಪಡಿಸಲಾಗಿದೆ.