ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲಾ ಅದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ನೇತ್ರತ್ವದಲ್ಲಿ ಉಡುಪಿ ನಗರದ ಮೀನು ಮಾರುಕಟ್ಟೆ, ರಿಕ್ಷಾನಿಲ್ದಾಣ, ಹಾಗೂ ಅಂಗಡಿ ಮುಗ್ಗಟ್ಟುಗಳಲ್ಲಿ ಬಿಜೆಪಿ ಸದಸ್ಯತ್ವ ಅಬಿಯಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ 300 ಕ್ಕೂ ಹೆಚ್ಚು ಸಾರ್ವಜನಿಕರು ಮಿಸ್ ಕಾಲ್ ನೀಡಿ ಬಿಜೆಪಿ ಸದಸ್ಯತ್ವ ಪಡೆದರು. ಯುವಮೋರ್ಚಾ ಪ್ರಭಾರಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಕಾಪು ,ಯುವಮೋರ್ಚಾ ಪ್ರಧಾನಕಾರ್ಯದರ್ಶಿ ಅಭಿರಾಜ್ ಸುವರ್ಣ, ಶಶಾಂಕ್ ಶಿವತ್ತಾಯ,ಬೈಂದೂರು ಮಂಡಲ ಬಿಜೆಪಿ ಅದ್ಯಕ್ಷ ಗಜೇಂದ್ರ ಎಸ್ ಬೇಲೆಮನೆ ,ಉಡುಪಿ ನಗರದ,ಜಿಲ್ಲೆಯ ಹಾಗೂ ವಿವಿಧ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.