Header Ads Widget

ಚಿಟ್ಟಾಡಿ : ಪೆಟ್ರೋಲ್ ಪಂಪ್ ಬಳಿ ಸ್ಕೂಟರ್ ಗೆ ಬೆಂಕಿ; ತಪ್ಪಿದ ಅನಾಹುತ!

ಪೆಟ್ರೋಲ್ ಸೋರಿಕೆಯಾಗಿ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಚಿಟ್ಟಾಡಿಯ ಪೆಟ್ರೋಲ್ ಪಂಪ್ ಶುಕ್ರವಾರ ರಾತ್ರಿ ಬಳಿ ಸಂಭವಿಸಿದೆ.

ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್ ತುಂಬಿದ ಬಾಟಲಿಯನ್ನು ಸ್ಕೂಟರ್ ಢಿಕ್ಕಿಯ ಒಳಗೆ ಇರಿಸಿದ್ದರು. ಬಾಟಲಿಯ ಪೆಟ್ರೋಲ್ ಲೀಕ್ ಆಗಿ ಇಂಜಿನ್ ಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಪೆಟ್ರೋಲ್ ಪಂಪ್ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟು ನಂದಿಸುವಲ್ಲಿ ಯಶಸ್ವಿಯಾದರು.

ಘಟನೆ ನಡೆದ ಸ್ಥಳದಿಂದ ಕೆಲವೇ ಅಂತರದಲ್ಲಿ ಹಲವು ಬಸ್ ಮತ್ತು ಇತರ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಇವರ ಸಮಯ ಪ್ರಜ್ಞೆಯಿಂದಾಗಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.