Header Ads Widget

ದಸರಾ ವೇದಿಕೆಯಲ್ಲೇ ಸಿದ್ದರಾಮಯ್ಯ ಪರ ದೇವೇಗೌಡ ಭರ್ಜರಿ ಬ್ಯಾಟಿಂಗ್!


ಮೈಸೂರು ದಸರಾ ಉದ್ಘಾಟನೆ ಸಮಾ ರಂಭದಲ್ಲಿ ಮಾತನಾಡಿದ ಅವರು, ಸಿದ್ದ ರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿ ದರು. ಹಾಗಾದರೆ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರಾ? ಎಂದು ಜೆಡಿಎಸ್ ನಾಯಕರ ವಿರುದ್ದನೇ ಹರಿಹಾಯ್ದರು.


ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ಒತ್ತಾಯ ಹೆಚ್ಚಾಗುತ್ತಿದೆ. ಅದರಲ್ಲೂ ಮಾಜಿ ಸಿಎಂ ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿ ದ್ದಾರೆ. ಮತ್ತೊಂದು ಕಡೆಯಲ್ಲಿ ಬಿಜೆಪಿ ನಾಯಕರು ಸಿದ್ದರಾಮಯ್ಯ ರಾಜೀನಾಮೆ ಬೇಡಿಕೆ ಇಟ್ಟಿದ್ದಾರೆ.

ಹೀಗಿರುವಾಗ ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ ಜಿಟಿ ದೇವೇಗೌಡ ಅವರ ಹೇಳಿಕೆ ಸಂಚಲನ ಮೂಡಿಸಿದೆ. ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ, ಬಿಜೆಪಿ ಜೆಡಿಎಸ್ ದೋಸ್ತಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಶಾಸಕ ಜಿ ಟಿ ದೇವೇಗೌಡ ಮಾಡಿದ ಭಾಷಣಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಖುಷಿಯಾಗಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿ, ಮೈಸೂರು ಹಿಂದೆ ರಾಜ್ಯವಾಗಿತ್ತು. ಆಮೇಲೆ ಅದು ಕರ್ನಾಟಕ ಎಂದು ನಾಮಕರಣ ವಾಯ್ತು. ದಸರಾ ಉದ್ಘಾಟಕರ ಆಯ್ಕೆ ಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಟ್ಟು ಕೊಟ್ಟಿದ್ವಿ. ಹಂಪನಾ ಅವರ ಆಯ್ಕೆ ಉತ್ತಮ ವಾಗಿದೆ. ಇವರು ಯಾವುದೇ ಕಾಂಟ್ರವರ್ಸಿ ಇಲ್ಲದ ಸಾಹಿತಿಗಳು. ಹಂಪನಾ ಅವರಿಗೆ ಚಾಮುಂಡೇಶ್ವರಿ ತಾಯಿ ಆಯಸ್ಸು ಆರೋಗ್ಯ ಕರುಣಿಸಲಿ ಎಂದರು.

ಸಿದ್ದರಾಮಯ್ಯನವರು ಚಾಮುಂಡೇಶ್ವರಿ ತಾಯಿಯ ವರಪುತ್ರರು ಹೌದು. ಚಾಮುಂ ಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವ ರಾಗಿ, ಡಿಸಿಎಂ ಆಗಿ, ಎರಡು ಬಾರಿ ಸಿಎಂ ಆಗಿದ್ದಾರೆ, ಎಂದರೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಇದಕ್ಕೆ ಕಾರಣ. ಎಂತಹ ಸಂದರ್ಭದಲ್ಲಿಯೂ ತಾಯಿ ಚಾಮುಂಡೇಶ್ವರಿ ಅವರ ಪಾಲಿಗೆ ಇದ್ದಾರೆ ಎಂದರು.

ಉಪ ಚುನಾವಣೆ ವೇಳೆ ಸಿದ್ದರಾಮಯ್ಯರನ್ನು ಸೋಲಿಸಲಿಕ್ಕೆ ನಾವು ತೀರ್ಮಾನ ಮಾಡಿದ್ವಿ. ಆದರೆ ಸಿದ್ದರಾಮಯ್ಯ ಆ ಚುನಾವಣೆಯಲ್ಲಿ ಗೆದ್ದರು. ಇದಕ್ಕೆ ಕಾರಣ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಅವರಿಗೆ ಇದೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಡಿಸಿಎಂ ಡಿ ಕೆ ಶಿವಕುಮಾರ್ ಕೂಡ ಕಾರಣ. 

ಸಚಿವ ಮಹದೇವಪ್ಪ ಎಲ್ಲಾ ಸಚಿವ ಸ್ಥಾನವನ್ನು ಪಡೆದಿದ್ದಾರೆ. ಒಬ್ಬ ದಲಿತ ನಾಯಕನನ್ನು ರಾಜ್ಯ ಮಟ್ಟಕ್ಕೆ ಕೊಂಡೊಯ್ದ ದ್ದು ಸಿದ್ದರಾಮಯ್ಯ ಎಂದು ಹೇಳುವ ಮೂಲಕ ಸಿಎಂ, ಡಿಸಿಎಂ, ಸಚಿವ ಮಹದೇವಪ್ಪರನ್ನು ಶಾಸಕ ಜಿ ಟಿ ದೇವೇಗೌಡ ಹಾಡಿ ಹೊಗಳಿದರು.

ಸಿದ್ದರಾಮಯ್ಯ ಯಾವತ್ತೂ ಕುಟುಂಬ ನೋಡಿದವರಲ್ಲ. ಈಗ ಎಲ್ಲಾ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಎಫ್ ಐ ಆರ್ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ, ಜೆಡಿಎಸ್ ನಲ್ಲಿ ಇರೋರು ಇಲ್ವಾ. ರಾಜೀ ನಾಮೆ ಕೊಡಲು ನ್ಯಾಯಾಲಯ ಹೇಳಿದೆ ಯಾ, ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ, ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ? ಎಂದು ಪ್ರಶ್ನಿಸಿದರು.

136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ  ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ? ಒಂದು ಅತ್ಯಾಚಾರ, ಕೊಲೆ ಪ್ರಕರಣವನ್ನು ತಿಂಗಳು ಗಟ್ಟಲೆ ಮಾಧ್ಯಮ ತೋರಿಸುತ್ತದೆ. ಒಂದು ಎಫ್ ಐ ಆರ್ ನಾ ಎಷ್ಟು ದಿನ ತೋರಿಸುತ್ತೀರಾ? ಯಾರ ಯಾರ ಮೇಲೆ ಎಫ್ ಐ ಆರ್ ಆಗಿದ್ಯೋ ಅವರೆಲ್ಲರೂ ರಾಜೀನಾಮೆ ಕೊಡಿ. 

ಎಲ್ಲಾ ವಿಧಾನಸೌಧದ ಮುಂದೆ ನಿಂತುಕೊಳ್ಳಿ, ಬನ್ನಿ ನೋಡೋಣ. ಕೇಂದ್ರದಿಂದ ರಾಜ್ಯಕ್ಕೆ ಏನು ತರಬೇಕೋ ಅದನ್ನು ನೋಡಿ. ಅದನ್ನು ಬಿಟ್ಟು ಬರೀ ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ? ಎಂದು ಕಿಡಿಕಾರಿದರು.