ಉಡುಪಿ: ಕಳೆದ ನಾಲ್ಕು ದಶಕಗಳಿಂದ ಜವಳಿ ವ್ಯವಹಾರದಲ್ಲಿ ಮನೆಮಾತಾಗಿರುವ ಆರ್‌ಕೆ ಸಹೋದರು ಇದೀಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್ ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ ಉದ್ಘಾಟಿಸಲಾಯಿತು.
ಉದ್ಯಮಿ ಡಾ.ಜಿ ಶಂಕರ್ ಮಾತನಾಡಿ, ಸಣ್ಣ ಅಂಗಡಿಯ ಮೂಲಕ ಸತತ ಪರಿಶ್ರಮ, ಶ್ರದ್ದೆಯಿಂದ ದುಡಿಯುತ್ತಾ, ಪ್ರಸ್ತುತ ಜಿಲ್ಲೆಯ ಲ್ಲಿಯೇ ಬೃಹತ್ ವಸ್ತ್ರ ವೈವಿಧ್ಯಗಳ ಮಳಿಗೆ ಯನ್ನು ತೆರೆಯುವ ಸಾಧನೆ ಮಾಡಿದ್ದಾರೆ.
ಗ್ರಾಹಕರಿಗೆ ಉತ್ತಮ ಸೇವೆ, ಗುಣಮಟ್ಟದ ವಸ್ತ್ರ ವಿನ್ಯಾಸಗಳನ್ನು ನೀಡಿದಾಗ ವ್ಯಾಪಾರ ಇನ್ನಷ್ಟು ಅಭಿವೃದ್ಧಿ ಹೊಂದುತ್ತದೆ ಎಂದು ಶುಭ ಹಾರೈಸಿದರು
ಮಾಂಡೋವಿ ಬಿಲ್ಡರ್ಸ್ ನ ಡಾ. ಜೆರ್ರಿ ವಿನ್ಸೆಂಟ್ ಡಯಾಸ್ ಮಾತನಾಡಿ, ನಾಲ್ಕು ದಶಕಗಳ ಹಿಂದೆ ಗುಣಮಟ್ಟದ ವಸ್ತ್ರಗಳ ಖರೀದಿಗೆ ದೂರದ ಪಟ್ಟಣಗಳಿಗೆ ತೆರಳಬೇಕಿತ್ತು.
ಆದರೆ ಪ್ರಸ್ತುತ, ಗೀತಾಂಜಲಿ ಸಿಲ್ಕ್ಸ್ ನಲ್ಲಿ ಉಡುಗೆ ತೊಡುಗೆಗಳು ಲಭ್ಯವಿದೆ ಎಂದರು.
ಸಂಸ್ಥೆಯ ಪಾಲುದಾರರಾದ ಲಕ್ಷ್ಮಣ ನಾಯಕ್, ರಮೇಶ್ ನಾಯಕ್, ಹರೀಶ್ ನಾಯಕ್ ಕುಟುಂಬಸ್ಥರು, ಸಿಬ್ಬಂದಿ, ಹಿತೈಷಿಗಳು, ಗ್ರಾಹಕರು ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಈ ಮಹಡಿಯಲ್ಲಿ ಮದುವೆ ಇತ್ಯಾದಿ ಧಾರ್ಮಿಕ ಸಮಾರಂಭಗಳಿಗೆ ಅಗತ್ಯವಿರುವ ಪಾರಂಪರಿಕ ಮತ್ತು ಆಧುನಿಕ ಶೈಲಿಯ ಬಟ್ಟೆಗಳು, ಆಫೀಸ್ ವೇರ್, ಡೈಲಿ ವೇರ್, ಕ್ಯಾಶುವಲ್ ವೇರ್, ಪಾರ್ಟಿ ವೇರ್ ಇತ್ಯಾದಿಗಳ ವಿಫುಲ ಸಂಗ್ರಹ ವನ್ನಡಲಾಗಿದೆ. ಅಲ್ಲದೇ ಗ್ರಾಹಕರ ಅಭಿರುಚಿಗೆ ಅನುಗುಣವಾಗಿ ಸೂಟಿಂಗ್ಸ್ – ಶರ್ಟಿಂಗ್ಸ್ ಜೊತೆಗೆ ಒಳಉಡುಪುಗಳು ಲಭ್ಯವಿದೆ.