ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಅ.17ರ ಗುರುವಾರ ಸರಣಿ ಅಪಘಾತ ಸಂಭವಿಸಿದೆ.
ತಾಂತ್ರಿಕ ತೊಂದರೆಯಿಂದ ಟ್ಯಾಂಕರ್ ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದು, ಅಪಘಾತದ ಪರಿಣಾಮ ಕಟಪಾಡಿ ಜಂಕ್ಷನ್ ನ ಸಿಸಿ ಕ್ಯಾಮರಾ ಸಹಿತ ವಾಹನಗಳು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಾಹನಗಳು ಉಡುಪಿಯತ್ತ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ. ಪವಾಡ ಸದೃಶವಾಗಿ ಕಾರಿನಲ್ಲಿದ್ದವರೂ, ದ್ವಿಚಕ್ರ ವಾಹನ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಟ್ಯಾಂಕರ್ ಸುಮಾರು ದೂರ ಚಲಿಸಿ ಮತ್ತೆ ನಿಂತಿದೆ.