ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಇಂದು ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಸ್ವಾಗತಿಸಿದರು.
ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಶೀರ್ವಚನ ಸ್ವೀಕರಿಸಿ ಮಂತ್ರಾಕ್ಷತೆ ಸ್ವೀಕರಿಸಿದರು.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.