ಖಾಸಗಿ ಬಸ್ ಕಂಡಕ್ಟರ್ ರೊಬ್ಬರ ಮೃತದೇಹ ಕೊಲೆಮಾಡಿದ ಸ್ಥಿತಿಯಲ್ಲಿ ಸ್ಟೇಟ್‌ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಸೋಮವಾರ ಪತ್ತೆಯಾಗಿದೆ.
ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30) ಮೃತಪಟ್ಟವರು.
ಯಾವುದೋ ವಿಚಾರಕ್ಕೆ ಗಲಾಟೆಯಾಗಿ ಅಥವಾ ಲೂಟಿ ಮಾಡುವ ಸಂದರ್ಭ ಪ್ರತಿರೋಧ ಒಡ್ಡಿರುವುದಕ್ಕೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.